ದೇಶ

ನವದೆಹಲಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ನವದೆಹಲಿ,ಏ.29-ಬೆಂಕಿಯ ಕೆನ್ನಾಲಿಗೆ ಕೆಮಿಕಲ್ ಫ್ಯಾಕ್ಟರಿ ಸುಟ್ಟು ಭಸ್ಮವಾಗಿರುವ ಘಟನೆ ನವದೆಹಲಿಯ ನರೈನಾ ಪ್ರದೇಶದಲ್ಲಿ ನಡೆದಿದೆ.

ಪಶ್ಚಿಮ ದೆಹಲಿಯ ನರೈನಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಅಗ್ನಿ ದುರಂತದಲ್ಲಿ ಯಾವುದೇ ಸಾವು ಸಂಭವಿಸಿದ ಬಗ್ಗೆ ಇದುವರೆಗೂ ವರದಿಯಾಗಿಲ್ಲ. ಸ್ಥಳಕ್ಕೆ 30 ಅಗ್ನಿ ಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ನರೈನಾ ಕೈಗಾರಿಕಾ ಪ್ರದೇಶದ ಪಾಯಲ್ ಸಿನೆಮಾ ಹಿಂಭಾಗದಲ್ಲಿರುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಿಯಂತ್ರಿಸುವ ಕಾರ್ಯ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

ಸುತ್ತಮುತ್ತಲು ದ್ವಿಚಕ್ರದಲ್ಲಿ ಸಂಚರಿಸುವ ಸವಾರರು ಮುಖಕ್ಕೆ ಬಟ್ಟೆಯನ್ನು ಕಟ್ಟಿಕೊಂಡು ಸಂಚರಿಸುತ್ತಿದ್ದಾರೆ. ಫೆಬ್ರವರಿಯಲ್ಲಿ ಅದೇ ಪ್ರದೇಶದಲ್ಲಿ ಗ್ರೀಟಿಂಗ್ ಕಾರ್ಡ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. (ಎಂ.ಎನ್)

Leave a Reply

comments

Related Articles

error: