ಪ್ರಮುಖ ಸುದ್ದಿ

ನಾಳೆ ಕಾನೂನು ಅರಿವು ಕಾರ್ಯಕ್ರಮ

ರಾಜ್ಯ( ಮಡಿಕೇರಿ) ಏ.30 :- ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಗ್ರಾಮ ಪಂಚಾಯತ್ ನೌಕರರ ಸಂಘ ಮತ್ತು ಸರ್ಕಾರಿ ಆಸ್ಪತ್ತೆಯ ಸ್ವಚ್ಛತಾ ಸಿಬ್ಬಂದಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಪ್ರಯುಕ್ತ ಮೇ 1 ರಂದು ಬೆಳಗ್ಗೆ 11 ಗಂಟೆಗೆ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ಗ್ರಾ.ಪಂ. ನೌಕರರ ಸಂಘದ ಅಧ್ಯಕ್ಷರಾದ ಪಿ.ಆರ್.ಭರತ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಕಾರ್ಮಿಕ ಅಧಿಕಾರಿ ಎಂ.ಎಸ್.ರಾಮಕೃಷ್ಣ, ಸಿ.ಐ.ಟಿ.ಯು ಕಾರ್ಯದರ್ಶಿ ಎಚ್.ಬಿ.ರಮೇಶ್, ತಲೆ ಹೊರೆ ಕಾರ್ಮಿಕರ ಸಂಘದ ಕಾರ್ಯದರ್ಶಿ ಹಸನಬ್ಬ, ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಗಳ ಸಂಘದ ಕಾರ್ಯದರ್ಶಿ ಜಾನಕಿ ಇತರರು ಪಾಲ್ಗೊಳ್ಳಲಿದ್ದಾರೆ.
ವಕೀಲರಾದ ವೈ. ಮನೋಜ್ ಬೋಪಯ್ಯ ಮತ್ತು ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ ಅವರು ಬಾಲ ಕಾರ್ಮಿಕ ನಿಷೇಧ ಕಾಯ್ದೆ ಮತ್ತು ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: