ಕರ್ನಾಟಕಪ್ರಮುಖ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಯಾವುದೇ ಸರ್ಕಾರಿ ಶಾಲೆಯಲ್ಲಿ ಶೂನ್ಯ ಫಲಿತಾಂಶವಿಲ್ಲ

ಬೆಂಗಳೂರು,ಏ.30-2019ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಹಾಸನ ಮೊದಲ ಸ್ಥಾನದಲ್ಲಿದೆ. ಇದರ ಜೊತೆಗೆ ಯಾವುದೇ ಸರ್ಕಾರಿ ಶಾಲೆಯಲ್ಲಿ ಶೂನ್ಯ ಫಲಿತಾಂಶ ಪ್ರಕಟವಾಗಿಲ್ಲ.

ಯಾವುದೇ ಸರ್ಕಾರಿ ಶಾಲೆಗಳು ಶೂನ್ಯ ಫಲಿತಾಂಶವನ್ನು ಪಡೆಯದೆ ಜನರು ಹುಬ್ಬೇರಿಸುವಂತೆ ವಿದ್ಯಾರ್ಥಿಗಳು ಮಾಡಿದ್ದಾರೆ. ಇದು ಕರ್ನಾಟಕದ ಪಾಲಿಗೆ ಹೆಮ್ಮೆಯ ವಿಷಯವಾಗಿದೆ.

ಕಳೆದ ಬಾರಿ 6 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿತ್ತು. ಒಟ್ಟು 593 ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿವೆ.

2019ನೇ ಸಾಲಿನಲ್ಲಿ ಶೇ 73.70ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರು ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಫಲಿತಾಂಶವನ್ನು ಪಡೆದಿದ್ದಾರೆ.

ಶೇ 79.59ರಷ್ಟು ಬಾಲಕಿಯರು, ಶೇ 68.46ರಷ್ಟು ಬಾಲಕರು ಉತ್ತೀರ್ಣಗೊಂಡಿದ್ದಾರೆ. ಹಾಸನ ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ ಜಿಲ್ಲೆಯ ಕಡೆಯ ಸ್ಥಾನದಲ್ಲಿದೆ.

ಅನುದಾನಿತ ಶಾಲೆಗಳ ಪೈಕಿ 130 ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಹಾಗೂ 9 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇನ್ನು 903 ಅನುದಾನರಹಿತ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಹಾಗೂ 37 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. (ಎಂ.ಎನ್)

Leave a Reply

comments

Related Articles

error: