ಕರ್ನಾಟಕಪ್ರಮುಖ ಸುದ್ದಿ

ಲಂಚ ಸ್ವೀಕಾರ: ಕೋರ್ಟ್ ಆವರಣದಲ್ಲೇ ಎಸಿಬಿ ಬಲೆಗೆ ಬಿದ್ದ ಸರ್ಕಾರಿ ಅಭಿಯೋಜಕಿ!

ತುಮಕೂರು (ಏ.30): ಸರ್ಕಾರಿ ಅಭಿಯೋಜಕಿಯೊಬ್ಬರು 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಸರ್ಕಾರಿ ಅಭಿಯೋಜಕಿ ಪೂರ್ಣಿಮಾ ಜಿ. ಅವರು ತಿಪಟೂರು ನ್ಯಾಯಾಲಯದ ಆವರಣದಲ್ಲಿ ಕಕ್ಷಿದಾರರಿಂದ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳು ಹಿಡಿದಿದ್ದಾರೆ.

ದೂರುದಾರ ಕೆಇಬಿ ಇಂಜಿನಿಯರ್ ಗುರುಬಸವಸ್ವಾಮಿ ಎಂಬುವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, 2015 ರಲ್ಲಿ ವಿದ್ಯುತ್ ಕಂಬ ವೃದ್ಧೆ ಮೇಲೆ ಬಿದ್ದು ಕಾಲು ತುಂಡಾಗಿದ್ದ ಪ್ರಕರಣ ಸಂಬಂಧ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಜಿ ವಕಾಲತ್ತು ವಹಿಸಿದ್ದರು. ಆದರೆ ಪ್ರಕರಣ ಸೋಮವಾರ ನ್ಯಾಯಾಲಯದಲ್ಲಿ ಖುಲಾಸೆಗೊಂಡಿತ್ತು.

ಈ ಬಗ್ಗೆ ಮೇಲ್ಮನವಿ ಸಲ್ಲಿಸಲು 40 ಸಾವಿರ ರೂ. ಲಂಚಕ್ಕಾಗಿ ಕೆಇಬಿ ಇಂಜಿನಿಯರ್ ಗುರುಬಸವಸ್ವಾಮಿ ಅವರ ಬಳಿ ಬೇಡಿಕೆ ಇಟ್ಟಿದ್ದರು. 20 ಸಾವಿರ ಅಕೌಂಟ್ ಮೂಲಕ ಹಣ ಪಡೆದಿದ್ದ ಅವರು, ಉಳಿದ 20 ಸಾವಿರ ರೂ.ನೇರವಾಗಿ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪ್ರಾಸಿಕ್ಯೂಟರ್ ಕಚೇರಿಯಲ್ಲೇ ರಾತ್ರಿ 10.30 ರ ವರೆಗೆ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. (ಎನ್.ಬಿ)

Leave a Reply

comments

Related Articles

error: