ಮೈಸೂರು

ನಂಜನಗೂಡು ಉಪಚುನಾವಣೆಗೆ ಟಿಕೆಟ್ ನೀಡುವಂತೆ ಒತ್ತಾಯ

ನಂಜನಗೂಡು ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಲು ಇಚ್ಛಿಸಿದ್ದು,  ಟಿಕೇಟ್ ಆಕಾಂಕ್ಷಿಯಾಗಿದ್ದೇನೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಡಿ.ಪ್ರಸನ್ನ ಕುಮಾರ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ನಾನು, 5 ದಶಕಗಳಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ. ನಂಜನಗೂಡು ಕ್ಷೇತ್ರದ ಎಲ್ಲಾ ಸಮಸ್ಯೆಗಳ ಅರಿವು ನನಗಿದೆ ಎಂದರು.

ಕಾಂಗ್ರೆಸ್ ಪಕ್ಷ ನಂಜನಗೂಡು ವಿಧಾನ ಸಭಾ ಉಪಚುನಾವಣೆಗೆ  ಅಭ‍್ಯರ್ಥಿಯ ಹುಡುಕಾಟದಲ್ಲಿದ್ದಾರೆ. ಮಾಧ್ಯಮಗಳಲ್ಲಿ ಬೇರೆ ಪಕ್ಷದಿಂದ ಅಭ್ಯರ್ಥಿಯನ್ನು ಕರೆತರುವ ಆಲೋಚನೆ ಮಾಡುತ್ತಿದ್ದಾರೆ ಎಂದು ತಿಳಿಯಿತು. ಈ ಸಂಗತಿ ನಿಜವಾಗಿದ್ದರೆ ಇದು ವಿಪರ್ಯಾಸವೇ ಸರಿ ಎಂದು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಅರ್ಹ ಅಭ್ಯರ್ಥಿಯಾದ ನನಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ನಾಗಶೆಟ್ಟಿ ಜಿ.ಎಂ, ಚಂದ್ರು, ಲಿಂಗಣ್ಣ, ಪ್ರಕಾಶ್ ಹಾಜರಿದ್ದರು.

Leave a Reply

comments

Related Articles

error: