ದೇಶ

ಲೈಂಗಿಕ ದೌರ್ಜನ್ಯದ ಆರೋಪ: ತನಿಖಾ ಸಮಿತಿ ಮುಂದೆ ವಿಚಾರಣೆಗೆ ಹಾಜರಾದ ರಂಜನ್ ಗೊಗೊಯ್

ನವದೆಹಲಿ,ಮೇ 2-ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿಚಾರಣೆಗೆ ಹಾಜರಾದರು.

ರಂಜನ್ ಗೊಗೆಯ್ ತನಿಖಾ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾದ ನಂತರ ಸಮಿತಿ ತನ್ನ ಅಭಿಪ್ರಾಯವನ್ನು ಸಮಿತಿ ಸೀಲ್ ಮಾಡಲಾದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಸ್..ಬೋಬ್ದೆ, ಇಂದು ಮಲ್ಹೋತ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರಿರುವ ತನಿಖಾ ಸಮಿತಿ, ವಿಚಾರಣೆಗೆ ಹಾಜರಾಗುವಂತೆ ಗೊಗೊಯ್ ಅವರಿಗೆ ಮನವಿ ಮಾಡಿತ್ತು.

ಸುಪ್ರೀಂಕೋರ್ಟ್ ಮಾಜಿ ಉದ್ಯೋಗಿಯಾಗಿರುವ ಮಹಿಳೆಯೊಬ್ಬರು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದಾರೆ. ಆದರೆ ಆರೋಪದ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿದ್ದ ರಂಜನ್ ಗೊಗೊಯ್, ತಾವು ತಪ್ಪು ಮಾಡಿಲ್ಲ ಎಂದು ಹೇಳಿದ್ದರು.

ರಂಜನ್ ಗೊಗೊಯ್ ಅವರು ತಮ್ಮ ಬಳಿ ಲೈಂಗಿಕ ಸಹಕಾರದ ಬೇಡಿಕೆ ಇರಿಸಿದ್ದರು. ಅದಕ್ಕೆ ತಾವು ಒಪ್ಪದ ಕಾರಣಕ್ಕೆ ಕೆಲಸದಿಂದ ವಜಾಗೊಳಿಸಲಾಯಿತು. ಮಾತ್ರವಲ್ಲ, ಪೊಲೀಸ್ ಇಲಾಖೆಯಲ್ಲಿದ್ದ ಪತಿ ಮತ್ತು ಅವರ ಸಹೋದರರನ್ನೂ ನೌಕರಿಯಿಂದ ಕಿತ್ತು ಹಾಕಲಾಯಿತು.

ಇದಾದ ಬಳಿಕ ಎರಡು ವರ್ಷದ ಹಿಂದೆ ಸುಪ್ರೀಂಕೋರ್ಟ್ನಲ್ಲಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬನಿಂದ ಹಣ ಪಡೆದುಕೊಂಡಿರುವುದಾಗಿ ಆರೋಪಿಸಿ ದೂರು ದಾಖಲಿಸಿ ಮಾರ್ಚ್ತಿಂಗಳಿನಲ್ಲಿ ಬಂಧಿಸಿ ಹಿಂಸಿಸಲಾಯಿತು ಎಂದು ಮಹಿಳೆ ಆರೋಪಿಸಿದ್ದರು. (ಎಂ.ಎನ್)

Leave a Reply

comments

Related Articles

error: