ಸುದ್ದಿ ಸಂಕ್ಷಿಪ್ತ

ಸಕಾಲ ಸೇವೆ : ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ

ಮಡಿಕೇರಿ ಮೇ 2 :- ಕರ್ನಾಟಕ ಸಕಾಲ ಸೇವೆ ಕಲ್ಪಿಸುವಲ್ಲಿ ಕೊಡಗು ಜಿಲ್ಲೆ ಪ್ರಥಮ ಸ್ಥಾನ ಹೊಂದಿದೆ. ಚುನಾವಣಾ ಕಾರ್ಯಭಾರ, ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳು, ಪರಿಹಾರ ವಿತರಣೆ ಮತ್ತಿತರ ಕೆಲಸ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರೂ ಸಹ ಸಾರ್ವಜನಿಕ ಸೇವೆಯನ್ನು ಒದಗಿಸುವಲ್ಲಿ ಕೊಡಗು ಜಿಲ್ಲಾಡಳಿತ ರಾಜ್ಯದಲ್ಲಿ ಪ್ರಥಮ ಜಿಲ್ಲೆಯಾಗಿ ಹೊರ ಹೊಮ್ಮಿರುವುದು ಪ್ರಶಂಸನೀಯವಾಗಿದೆ.
ಮೇ ತಿಂಗಳಲ್ಲಿ ರಾಜ್ಯ ಸರ್ಕಾರ ಸಕಾಲ ಸೇವೆಗಳ ಕಾರ್ಯ ಪ್ರಗತಿಯಲ್ಲಿ ರ್ಯಾಂಕ್ ಪಟ್ಟಿ ಪ್ರಕಟಿಸಿದ್ದು, ಸಾರ್ವಜನಿಕರಿಗೆ ಸೇವೆ ಒದಗಿಸುವಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಹೊಂದಿರುವುದು ಶ್ಲಾಘನೀಯವಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಯವರು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ಒದಗಿಸಿ ಸಕಾಲ ಸೇವೆಯಲ್ಲಿ ಕೊಡಗು ಜಿಲ್ಲೆ ಪ್ರಥಮ ಸ್ಥಾನ ಕಾಯ್ದುಕೊಳ್ಳುವಂತೆ ಎಲ್ಲರೂ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: