ಮೈಸೂರು

ಮೈಸೂರಿನ ರೈಲ್ವೆ ಆಸ್ಪತ್ರೆ ವೈದ್ಯರ ವರ್ಗಾವಣೆ ಖಂಡಿಸಿ ಪ್ರತಿಭಟನೆ

ಮೈಸೂರು,ಮೇ.3:- ಮೈಸೂರಿನ ರೈಲ್ವೆ ಆಸ್ಪತ್ರೆ ವೈದ್ಯರ ವರ್ಗಾವಣೆ ಖಂಡಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಿನ್ನೆ ಮೈಸೂರಿನಲ್ಲಿರುವ ಒಂಟಿಕೊಪ್ಪಲಿನಲ್ಲಿರುವ ರೈಲ್ವೆ ಆಸ್ಪತ್ರೆ ಎದುರು  ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.  ರೈಲ್ವೆ ಆಸ್ಪತ್ರೆ ವೈದ್ಯರಾದ ಡಾ.ಶಿವಕುಮಾರ್ ಮತ್ತು ಶೋಭಾ ಅವರು ಹುಬ್ಬಳ್ಳಿ ಸೆಂಟ್ರಲ್ ರೈಲ್ವೆ ಆಸ್ಪತ್ರೆಗೆ ವರ್ಗಾವಣೆಗೊಂಡಿದ್ದಾರೆ. ಹೀಗಾಗಿ  ಡಾ.ಶಿವಕುಮಾರ್ ಮತ್ತು ಶೋಭಾ ವರ್ಗಾವಣೆ ಹಿಂಪಡೆಯುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ರೈಲ್ವೆ  ವರ್ಕಶಾಪ್ ಯೂನಿಯನ್ ಅಧ್ಯಕ್ಷ ಯತಿರಾಜ್, ವೈದ್ಯರ ವರ್ಗಾವಣೆ ಹಿಂಪಡೆಯುವಂತೆ ಒತ್ತಾಯಿಸಿ ವೈದ್ಯಕೀಯ ವಿಭಾಗದ ಮುಖ್ಯಸ್ಥರಿಗೆ ಮನವಿ ಸಲ್ಲಿಸಲಾಗಿದೆ.  ಉತ್ತಮ ಸೇವಾ ಮನೋಭಾವನೆ ಹೊಂದಿರುವ ವೈದ್ಯರ ವರ್ಗಾವಣೆ ಸರಿಯಲ್ಲ. ದಕ್ಷ ಮತ್ತು ಪ್ರಾಮಾಣಿಕ ವೈದ್ಯರನ್ನು ಇಲ್ಲೇ ಮುಂದುವರೆಸಬೇಕೆಂದು ಒತ್ತಾಯಿಸುತ್ತೇವೆ ವರ್ಗಾವಣೆ ಆದೇಶ ಹಿಂಪಡೆಯದಿದ್ದರೆ  ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: