ಮೈಸೂರು

ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

 ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು  ಮೈಸೂರು ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ವಿಜಯನಗರದಲ್ಲಿರುವ ಸಿ.ಎಸ್.ಆರ್. ಟ್ಯಾಂಕ್ ರೂಫ್ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ದುರಸ್ಥಿ ಕಾಮಗಾರಿಯನ್ನು ಅಮೃತ್ ಯೋಜನೆಯಡಿ ಕೈಗೊಳ್ಳಲಾಗಿದೆ. ಏಜೆನ್ಸಿ ನಿಗಿದಿಯಾಗಿದ್ದು, ಕಾಮಗಾರಿ ಪೂರ್ಣಗೊಳಿಸಲು18 ತಿಂಗಳ ಕಾಲಾವಕಾಶ ನೀಡಲಾಗಿದೆ. ಕುಡಿಯುವ ನೀರು ತುರ್ತಾಗಿ ಪೂರೈಸಬೇಕಾದ್ದರಿಂದ ಒಂದೇ ವರ್ಷದಲ್ಲಿ ಪೂರ್ಣಗೊಳಿಸಬೇಕು ಎಂದು ಸಚಿವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಾಮುಂಡಿ ಬೆಟ್ಟದಲ್ಲಿ ನಿರ್ಮಿಸಲಾಗುತ್ತಿರುವ ಬಹುಹಂತದ ಪಾರ್ಕಿಂಗ್ ಕಟ್ಟಡ ಕಾಮಗಾರಿ ಹಾಗೂ ಜರ್ಮನ್ ಪ್ರೆಸ್ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡದ ಕಾಮಗಾರಿಯನ್ನು ಸಚಿವರು ವೀಕ್ಷಿಸಿದರು.
ಈ ಸಂದರ್ಭ ಮೇಯರ್ ಎಮ್.ಜೆ. ರವಿಕುಮಾರ್  ಉಪಸ್ಥಿತರಿದ್ದರು

Leave a Reply

comments

Related Articles

error: