
ಪ್ರಮುಖ ಸುದ್ದಿ
ಕಂದಾಯ ಕಾರ್ಯದರ್ಶಿ ಭೇಟಿ : ಸಂತ್ರಸ್ತರ ನಿರ್ಮಾಣ ಹಂತದ ಮನೆಗಳ ಗುಣಮಟ್ಟ ಪರಿಶೀಲನೆ
ರಾಜ್ಯ(ಮಡಿಕೇರಿ) ಮೇ 4 :- ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ರಾಜ್ ಕುಮಾರ್ ಖತ್ರಿ ಅವರು ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ನಿರ್ಮಾಣವಾಗುತ್ತಿರುವ ಮಳೆಹಾನಿ ಸಂತ್ರಸ್ತರ ಮನೆಗಳ ಗುಣಮಟ್ಟವನ್ನು ಪರಿಶೀಲಿಸಿದರು.
ಬಳಿಕ ನಗರದ ಕಾನ್ವೆಂಟ್ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ನಗರದ ಹಳೇ ಖಾಸಗಿ ಬಸ್ ನಿಲ್ದಾಣ ಸ್ಥಳ ವೀಕ್ಷಣೆ ಮಾಡಿದರು. ನಂತರ ಮಂಗಳೂರು ರಸ್ತೆ ಜಿಲ್ಲಾಡಳಿತ ಭವನದ ಬರೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಕಾಮಗಾರಿಗಳ ನಿರ್ವಹಣೆ, ನೀಲ ನಕಾಶೆ ಮತ್ತಿತರ ಸಂಬಂಧ ಮಾಹಿತಿ ಪಡೆದರು.
ಈ ಕಾಮಗಾರಿಗಳ ಸಂಬಂಧ ಕಂದಾಯ ಇಲಾಖೆ ವತಿಯಿಂದ ಎಲ್ಲಾ ರೀತಿಯ ಅನುಮತಿ ನೀಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಷಂಶುದ್ದೀನ್, ತಹಶೀಲ್ದಾರರು ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)