ಸುದ್ದಿ ಸಂಕ್ಷಿಪ್ತ

ಯುವ ಪರಿವರ್ತಕರ ಪ್ರಾರಂಭಿಕ ತರಬೇತಿ

ಮೈಸೂರು ಮೇ. 3.  :- ಜನ ಆರೋಗ್ಯ ಸಂಸ್ಥೆ, ಎಸಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಟಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭವೃದ್ಧಿ ಮತ್ತು ಅನುಷ್ಟಾನ ಯೋಜನೆ”ಯಡಿಯಲ್ಲಿ ಯುವ ಪರಿವರ್ತಕರ ಪ್ರಾರಂಭಿಕ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರು 21 ರಿಂದ 35 ವರ್ಷದೊಳಗಿರಬೇಕು. ಪದವಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ, ಹುಮ್ಮಸ್ಸು, ಉತ್ತಮ ಅಂತರ್ ವ್ಯಕ್ತೀಯ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು, ಮೈಸೂರು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ, ಅನುಭವ-ಸಮುದಾಯದಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರುವ ಹಾಗೂ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ತಮ್ಮ ಸೂಕ್ತ ಪ್ರಸ್ತಾವನೆಯನ್ನು  09-05-2019 ರ ಒಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‍ಬಾದ್, ಮೈಸೂರು ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0821-2564179 ರ ಮೂಲಕ ಹಾಗೂ ಇ-ಮೇಲ್ ವಿಳಾಸ  www.nimhans.kar.nic.in/ notifications.htm  ರ ಮೂಲಕ ಸಂಪರ್ಕಿಸಬಹುದಾಗಿದೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: