ಮೈಸೂರು

ಪಾಲಿಕೆಯ ಅನುಮತಿ ಇಲ್ಲದೇ ಕಟ್ಟಡ ನಿರ್ಮಾಣ : ಸದಸ್ಯರಿಂದ ಆಡಳಿತ ಮಂಡಳಿಯ ತರಾಟೆ

 ಮೈಸೂರಿನ ನಾರಾಯಣ ಶಾಸ್ತ್ರೀ ರಸ್ತೆಯಲ್ಲಿರುವ ಮಲ್ಲಮ್ಮ ಮರಿಮಲ್ಲಪ್ಪ ಮಹಿಳಾ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಮಹಾನಗರಪಾಲಿಕೆಯಿಂದ ಯಾವುದೇ ಅನುಮತಿ ಪಡೆಯದೇ ಮೂರನೇ ಮಹಡಿಯನ್ನು ಕಟ್ಟಲಾಗುತ್ತಿದೆ ಎಂದು ಆರೋಪಿಸಿ ಪಾಲಿಕೆಯ 36ನೇ ವಾರ್ಡ್ ನ ಸದಸ್ಯರು ಅಧಿಕಾರಿಗಳೊಂದಿಗೆ ತೆರಳಿ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಮರಿಮಲ್ಲಪ್ಪ ಕಾಲೇಜಿನಲ್ಲಿ ಮೂರನೇ ಮಹಡಿಯನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕೆ ಪಾಲಿಕೆಯಿಂದ ಯಾವುದೇ ಅನುಮತಿಯನ್ನೂ ಪಡೆದಿಲ್ಲ. ಹಾಗೂ ಸಂಬಂಧಪಟ್ಟವರ ಗಮನಕ್ಕೂ ತರದೇ ಅನಧಿಕೃತವಾಗಿ ಕಟ್ಟಡವನ್ನು ಕಟ್ಟಲಾಗುತ್ತಿದೆ. ತೆರಿಗೆ ಕಟ್ಟಲಾಗಿದೆಯೇ ಎಂದು ಪರೀಕ್ಷಿಸಿದಾಗ, ಇನ್ನೂ ತೆರಿಗೆ ಕಟ್ಟದೇ 71ಲಕ್ಷ ರೂ.ತೆರಿಗೆ ಉಳಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ನೋಟೀಸ್ ಜಾರಿ ಮಾಡಿದರೂ ಯಾವುದೇ ಉತ್ತರ ಲಭಿಸಿಲ್ಲ ಮತ್ತು ತೆರಿಗೆ ಕಟ್ಟಲು ಮುಂದಾಗಿಲ್ಲ ಎಂದು ವಾರ್ಡ್ 36ರ ಸದಸ್ಯ ಪ್ರಶಾಂತ ಗೌಡ ತಿಳಿಸಿದರು.

ಸಹಾಯಕ ಆಯುಕ್ತ ಸೋಮಶೇಖರ್ ನೋಟೀಸ್ ಜಾರಿ ಮಾಡಿ ಕೂಡಲೇ ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚಿಸಿದ್ದಾರೆ. ಏತನ್ಮಧ್ಯೆ ಪ್ರಶಾಂತಗೌಡ ಮತ್ತು ಕಾಲೇಜಿನ ಆಡಳಿತ ಮಂಡಳಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

comments

Related Articles

error: