ಸುದ್ದಿ ಸಂಕ್ಷಿಪ್ತ

ವಚನ ಗಾಯನ – ಬಸವಣ್ಣನವರ ಭಾವಚಿತ್ರಗಳಿಗೆ ಬಣ್ಣ ಹಚ್ಚುವ ಸ್ಪರ್ಧೆ ನಾಳೆ

ಮೈಸೂರು,ಮೇ.4 : ಹೊಸಮಠ, ಮೈಸೂರು ಆರ್ಟ್ ಗ್ಯಾಲರಿ, ಶರಣು ವಿಶ್ವವಚನ ಫೌಂಡೇಷನ್ ಹಾಗೂ ಇತರೆ ಸಂಸ್ಥೆಗಳೊಂದಿಗೆ ಬಸವ ಜಯಂತಿ ಪ್ರಯುಕ್ತ ವಚನ ಗಾಯನ ಹಾಗೂ ಬಸವಣ್ಣನವರ ಭಾವಚಿತ್ರಗಳಿಗೆ ಬಣ್ಣ ಹಚ್ಚುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಮೇ.5ರ ಮಧ್ಯಾಹ್ನ 2 ಗಂಟೆಯಿಂದ ಶಂಕರಮಠ ರಸ್ತೆಯ ಹೊಸಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀ ಚಿದಾನಂದಸ್ವಾಮೀಜಿ ಸಾನಿಧ್ಯ ವಹಿಸುವರು, ಮೈಸೂರು ವೈದ್ಯಕೀಯ ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಕೆ.ಎಂ.ಗಾಯತ್ರಿ ಇರುವರು, ಟಿ.ನರಸೀಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸ್ವಾಮಿ ಉಪನ್ಯಾಸ ನೀಡಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: