ಕರ್ನಾಟಕ

ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ನಿಗಾವಹಿಸಲು ಹಾಸನ ಡಿ.ಸಿ ಸೂಚನೆ

ಹಾಸನ (ಮೇ 4): ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ತೊಂದರೆಯಾಗದಂತೆ ಹೆಚ್ಚಿನ ನಿಗಾವಹಿಸಿ ಅಗತ್ಯವಿರುವ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸಿ ಬರನಿರ್ವಹಣೆಗೆ ಆಧ್ಯತೆ ನೀಡಿ ಎಂದು ಸೂಚನೆ ನೀಡಿದರು.

ಕೃಷಿ ಇಲಾಖೆಯ ಮೂಲಕ ನೀಡುತ್ತಿರುವ ಉತ್ತಮ ಗುಣಮ್ಟದ ಬಿತ್ತನೆ ಬೀಜಗಳು ಮತ್ತು ಇನ್ನಿತರ ಸೌಲಭ್ಯಗಳು ನೇವಾಗಿ ರೈತರಿಗೆ ತಲುಪಬೇಕು ಹಾಗೂ ಜಾನುವಾರುಗಳಿಗೆ ಅಗತ್ಯವಿರುವ ಮೇವಿನ ಸಂಗ್ರಹಣೆ ಬಗ್ಗೆ ಪಶು ಸಂಗೋಪನಾ ಇಲಾಖೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಜಿಲ್ಲೆಯಲ್ಲಿ ಅಗತ್ಯವಿರುವ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ನಿಲಯಗಳು ಹಾಗೂ ಇನ್ನಿತರ ಕಟ್ಟಡಗಳಿಗೆ ಅವಶ್ಯವಿರುವ ಸ್ಥಳಾವಕಾಶಗಳನ್ನು ಗುರುತಿಸಿ ಉವಿಭಾಗಾಧಿಕಾರಿಗಳು, ತಹಶೀಲ್ದಾರರು, ಸರ್ವೆ ಇಲಾಖೆ ಅಧಿಕಾರಿಗಳು ಮತ್ತು ಹೂಡಾ ಅಧಿಕಾರಿಗಳನ್ನು ಸಂಪರ್ಕಿಸಿ ಬೇಹನ್ನೇ ನಿವೇಶನಗಳನ್ನು ಪಡೆಯಿರಿ ಎಂದು ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗಂಗಾ ಕಲ್ಯಾಣ ಯೋಜನೆಯಡಿ ನಿರ್ಮಿಸಿರುವ ಕೊಳವೆ ಭಾವಿಗಳಿಗೆ ಅಗತ್ಯವಿರುವ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಯಾವುದೇ ಇಲಾಖೆಗೆ ಅರ್ಜಿಗಳು ಬಂದಲ್ಲಿ ಕೂಡಲೇ ಅವುಗಳನ್ನು ಪರಿಶೀಲಿಸಿ ಅವರ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿಗಳಾದ ಎಂ.ಎಲ್ ವೈಶಾಲಿ, ಸಕಲೇಶಪುರ ಉಪವಿಭಾಗಾಧಿಕಾರಿಗಳಾದ ಕವಿತಾ ರಾಜಾರಾಮ್ ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. (ಎನ್.ಬಿ)

Leave a Reply

comments

Related Articles

error: