ಕರ್ನಾಟಕಪ್ರಮುಖ ಸುದ್ದಿ

ಸರ್ಕಾರಿ ಮೊರಾರ್ಜಿ ದೇಸಾಯಿ ಮಹಿಳಾ ವಸತಿ ಪದವಿ ಪೂರ್ವ ಕಾಲೇಜಿಗೆ ಅರ್ಜಿ ಆಹ್ವಾನ

ಹಾಸನ (ಮೇ 4): 2019-20ನೇ ಸಾಲಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೊರಾರ್ಜಿ ದೇಸಾಯಿ ಮಹಿಳಾ ವಸತಿ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ 75% ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಓಬಿಸಿ) ಶೇ: 25% ಸೀಟು ಲಭ್ಯವಿರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಈ ಕೆಳಕಂಡ ವಸತಿ ಕಾಲೇಜು ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಕಛೇರಿ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ/ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನ ಆಜಾದ್ ಭವನ, ಶ್ರೀ ವಿದ್ಯಾಗಣಪತಿ ಅಡ್ಡ ರಸ್ತೆ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ. ಇಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಮೇ.15 ರೊಳಗೆ ಸಲ್ಲಿಸಲು ತಿಳಿಸಿದೆ.

ವಸತಿ ಕಾಲೇಜಿನಲ್ಲಿ ದೊರೆಯುವ ಸೌಲಭ್ಯಗಳು: ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿವೆರೆಗೆ ಉಚಿತ ಶಿಕ್ಷಣ, ಉಚಿತ ಭೋಜನ, ಪಠ್ಯಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು ಒದಗಿಸಲಾಗುವುದು. ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಂಪ್ಯೂಟರ್ ತರಗತಿಗಳನ್ನು ನಡೆಸಲಾಗುವುದು.

ಸರ್ಕಾರಿ ಮೊರಾರ್ಜಿ ದೇಸಾಯಿ ಮಹಿಳಾ ವಸತಿ ಪದವಿ ಪೂರ್ವ ಕಾಲೇಜಿನ ವಿವರ:- ಸರ್ಕಾರಿ ಮೊರಾರ್ಜಿ ದೇಸಾಯಿ ಮಹಿಳಾ ವಸತಿ ಪದವಿ ಪೂರ್ವ ಕಾಲೇಜು, ಗುರುಮಾರನಹಳ್ಳಿ, ಚನ್ನರಾಯಪಟ್ಟಣ ತಾಲ್ಲೂಕು. ಆಂಗ್ಲ ಮಾಧ್ಯಮ ಶಾಲೆಯಲ್ಲಿ 60 ದಾಖಲಾತಿ ಸಂಖೆ ಹಾಗೂ 9880125154, 8618922889 ಅನ್ನು ಅಥವಾ ದೂರವಾಣಿ ಸಂಖ್ಯೆ: 08172-268373 / 08172-267373 ಹಾಗೂ ಕಚೇರಿಯನ್ನು ಬೆಳಿಗ್ಗೆ 10ರಿಂದ ಸಂಜೆ 5.30 ರ ಒಳಗಾಗಿ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: