ಪ್ರಮುಖ ಸುದ್ದಿ

ಸರ್ಕಾರ ಬೀಳುತ್ತೆ ಅಂತ ನಾನು ಎಂದೂ ಹೇಳಿಲ್ಲ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ

ರಾಜ್ಯ(ಕಲ್ಬುರ್ಗಿ) ಮೇ.6:- ರಾಜ್ಯ ಸಮ್ಮಿಶ್ರ ಸರ್ಕಾರ ಮೇ 23ರ ನಂತರ ಬೀಳುತ್ತೆ. ಬಿಎಸ್ ಯಡಿಯೂರಪ್ಪ ಮತ್ತೆ ಸಿಎಂ ಆಗ್ತಾರೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದರೆ ಇತ್ತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತ್ರ ಸರ್ಕಾರ ಬೀಳುತ್ತೆ ಅಂತ ನಾನು ಎಂದೂ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ 22ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲುತ್ತೇವೆ. ಕೇಂದ್ರದಿಂದ ಸರ್ವೆ ಮಾಡಿಸಿದ್ದೇವೆ.  ತುಮಕೂರು, ಕಲ್ಬುರ್ಗಿ ಕೋಲಾರದಲ್ಲಿ ಬಿಜೆಪಿ ಗೆಲ್ಲುತ್ತದೆ. ಹಾಸನದಲ್ಲಿ ಸ್ವಲ್ಪ ಫೈಟ್ ಇದೆ. ಇನ್ನು ಚಿಂಚೋಳಿ, ಕುಂದಗೋಳದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ನಾನು ವಿಪಕ್ಷ ನಾಯಕನಾಗಿ ಮುಂದುವರೆಯುತ್ತೇನೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: