ಮೈಸೂರು

ಜಮೀನು ಆಕ್ರಮಿಸಿಕೊಂಡಿರುವವರನ್ನು ಬಂಧಿಸಿ : ದಸಂಸ ಪ್ರತಿಭಟನೆ

ದಲಿತ ವಿಧವೆ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿ, ಸದರಿ ಕುಟುಂಬದ ಸುಪರ್ದಿಯಲ್ಲಿರುವ ಭೂಮಿಯನ್ನು ಆಕ್ರಮಿಸಿಕೊಂಡಿರುವ ದಾಸನಕೊಪ್ಪಲು ಜಯರಾಮು ಮತ್ತು ಶಾಂತಕುಮಾರ್ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ  ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಿಭಟನಾಕಾರರು ನಗರದ ಬೋಗಾದಿ ರಿಂಗ್ ರಸ್ತೆ ಸರ್ಕಲ್ ನಲ್ಲಿರುವ ಸರ್ವೆ.ನಂ.83/2ಎ1 83/2ಬಿ, 83/2 ಭೂಮಿಯು ದಲಿತ ಮಹಿಳೆ ಶಿವಮ್ಮನವರಿಗೆ ಸೇರಬೇಕಾದ ಜಾಗವಾಗಿದ್ದು, ಈ ಭೂಮಿಯನ್ನು ಜಯರಾಮು ಮತ್ತು ಶಾಂತಕುಮಾರ್ ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕು. ಆರೋಪಿಗಳನ್ನು ಬಂಧಿಸದೇ ಅವರಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡುತ್ತಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೋಗಾದಿ ಸರ್ವೆ ನಂ. 83/2ಎ1 83/2ಬಿ, 83/2 ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಅಂಗಡಿಗಳನ್ನು ಕೂಡಲೇ ತೆರವುಗೊಳಿಸಬೇಕು. ಅಕ್ರಮಗಳಲ್ಲಿ ಭಾಗಿಯಾಗಿರುವ ಮೂಡಾ ಅಧಿಕಾರಿಗಳು, ಮೈಸೂರು ತಹಶೀಲ್ದಾರ್, ಕಂದಾಯ ಅಧಿಕಾರಿಗಳು ಮತ್ತು ಸರ್ವೆಯರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ವಿಭಾಗೀಯ ಸಂಚಾಲಕ ದೇವಗಳ್ಳಿ ಸೋಮಶೇಖರ್, ಜಿಲ್ಲಾ ಸಂಚಾಲಕ ರಾಜಶೇಖರ ಕೋಟೆ, ಬೊಕ್ಕಳ್ಳಿ ಮಹದೇವಸ್ವಾಮಿ, ಗಣೇಶ್, ಸುರೇಶ್, ಪಿ.ಮಹದೇವ್ ಮತ್ತಿತರರು ಭಾಗವಹಿಸಿದ್ದರು.

 

Leave a Reply

comments

Related Articles

error: