ಮೈಸೂರು

ಬೈಕ್ ಗೆ ಲಾರಿ ಡಿಕ್ಕಿ : ಸವಾರ ಸಾವು

ಮೈಸೂರು,ಮೇ.7:- ಬೈಕ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಮೈಸೂರು-ಬೆಂಗಳೂರು ಹಳೇ ಟೋಲ್ ಗೇಟ್  ಜಂಕ್ಷನ್ ಬಳಿ   ನಡೆದಿದೆ.

ಮೃತರನ್ನು ಶ್ರೀರಂಗಪಟ್ಟಣದ ನಿವಾಸಿ ನಂಜುಂಡಸ್ವಾಮಿ(45)ಎಂದು ಗುರುತಿಸಲಾಗಿದೆ. ಇವರು ಮೈಸೂರು-ಬೆಂಗಳೂರು ರಸ್ತೆಯ ಹಳೆ ಟೋಲ್ ಗೇಟ್ ಜಂಕ್ಷನ್ ಬಳಿ ಹೋಗುತ್ತಿದ್ದರು. ಈ ವೇಳೆ ಅತಿವೇಗದಿಂದ ಬಂದ ಲಾರಿಯ ಚಾಲಕ ಜಂಕ್ಷನ್ ಬಳಿ ಬಲಕ್ಕೆ ತಿರುಗಿಸಿದಾಗ ಬೈಕ್ ಗೆ ಡಿಕ್ಕಿಯಾಗಿದೆ. ಬೈಕ್ ನಿಂದ ಕೆಳಗೆ ಬಿದ್ದ ನಂಜುಂಡಸ್ವಾಮಿ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ ಅವರು ಸಾವನ್ನಪ್ಪಿದ್ದಾರೆ. ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಎನ್.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: