ಮನರಂಜನೆ

ಜುಲೈ 26ಕ್ಕೆ ‘ಡಿಯರ್ ಕಾಮ್ರೇಡ್’ ರಿಲೀಸ್

ಹೈದರಾಬಾದ್,ಮೇ 9-ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೇಡ್’ ಸಿನಿಮಾ ರಿಲೀಸ್ ದಿನಾಂಕ ಬಹಿರಂಗವಾಗಿದೆ.

ಪುಟ್ಟ ಟೀಸರ್ ಮೂಲಕ ಅಭಿಮಾನಿಗಳ ಹಾರ್ಟ್ ಬೀಟ್ ಹೆಚ್ಚಿಸಿರುವ ‘ಡಿಯರ್ ಕಾಮ್ರೇಡ್’ ಜುಲೈ 26ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಈ ಬಗ್ಗೆ ಸ್ವತಃ ನಟ ವಿಜಯ್ ದೇವರಕೊಂಡ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ರಶ್ಮಿಕಾ ಮತ್ತು ವಿಜಯ್ ನಡುವಿನ ಲಿಪ್ ಲಾಕ್ ದೃಶ್ಯದ ಟೀಸರ್ ಸೌತ್ ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿತ್ತು.

ಒಂದು ಪುಟ್ಟ ಟೀಸರ್ ಮತ್ತು ಒಂದು ಹಾಡನ್ನು ಮಾತ್ರ ರಿಲೀಸ್ ಮಾಡಿ ಅಭಿಮಾನಿಗಳ ಕುತೂಹಲ ಹೆಚ್ಚಿಸಿತ್ತು ಡಿಯರ್ ಕಾಮ್ರೇಡ್ ಚಿತ್ರತಂಡ. ಟೀಸರ್ ನಲ್ಲಿಯೆ ಲಿಪ್ ಲಾಕ್ ಮಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ವಿಜಯ್ ಮತ್ತು ರಶ್ಮಿಕಾ ಇನ್ನು ಸಿನಿಮಾ ರಿಲೀಸ್ ಆದ್ಮೇಲೆ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎನ್ನುವುದನ್ನು ಕಾದು ನೋಡಬೇಕು.

‘ಡಿಯರ್ ಕಾಮ್ರೇಡ್’ ಸಿನಿಮಾ ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡದಲ್ಲಿ ತೆರೆಗೆ ಬರುತ್ತಿದೆ. ರಶ್ಮಿಕಾ ಜೊತೆ ಕನ್ನಡಕ್ಕೆ ಮೊದಲ ಬಾರಿಗೆ ಎಂಟ್ರಿ ಕೊಡುತ್ತಿರುವ ವಿಜಯ್ ದೇವರಕೊಂಡ ನೋಡಲು ಕನ್ನಡ ಅಭಿಮಾನಿಗಳು ಕಾಯುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: