ಕರ್ನಾಟಕ

ಎಸ್‌.ಎಂ.ಕೃಷ್ಣ ರಾಜೀನಾಮೆ ಮುಗಿದ ಅಧ್ಯಾಯ; ಯಾವ ಪಕ್ಷಕ್ಕಾದ್ರೂ ಹೋಗಲಿ: ರಮೇಶ್ ಕುಮಾರ್

“ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರ ಮುಗಿದ ಅಧ್ಯಾಯ. ಅವರು ಯಾವ ಪಕ್ಷಕ್ಕೆ ಬೇಕಾದರೂ ಹೋಗಲಿ” ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾತನಾಡಿದ ಅವರು, ಎಸ್‌.ಎಂ.ಕೃಷ್ಣ ಕಾಂಗ್ರೆಸ್ ತೊರೆದಿರುವುದು ಮುಗಿದ ಅಧ್ಯಾಯ. ಅವರ ಮನವೊಲಿಸುವ ಪ್ರಯತ್ನವನ್ನು ನಿಲ್ಲಿಸಲಾಗಿದೆ. ಅವರಿಗೆ ಬೇಕಾದ ಪಕ್ಷಕ್ಕೆ ಅವರು ಹೋಗಲಿ ಎಂದರು. ಕಾಂಗ್ರೆಸ್‍ನಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಕಳೆದ ಜ.28ರಂದು ಎಸ್‍ಎಂಕೆ ಕಾಂಗ್ರೆಸ್‍ಗೆ ರಾಜೀನಾಮೆ ಸಲ್ಲಿಸಿದ್ದರು. ಕೃಷ್ಣ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ತೆರೆಮರೆಯಲ್ಲಿ ಪ್ರಯತ್ನಗಳು ನಡೆದಿವೆ.

Leave a Reply

comments

Related Articles

error: