ಸುದ್ದಿ ಸಂಕ್ಷಿಪ್ತ

ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಯಾಗಿ ಅರ್ಚನಾ ನೇಮಕ

ಹಾಸನ (ಮೇ 11): ಭಾರತ ಚುನಾವಣಾ ಆಯೋಗವು ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ನೂಡಲ್ ಅಧಿಕಾರಿಯಾಗಿ ನೇಮಕ ಗೊಂಡಿದ್ದ ಐ.ಎ.ಎಸ್ ಪರೀಕ್ಷಾರ್ಥಿ ಪ್ರಿಯಾಂಗ.ಎಂ. ಅವರ ಪರೀಕ್ಷಾರ್ಥ ಅವಧಿಯು ಮುಕ್ತಾಯಗೊಂಡ ಕಾರಣ ಅವರನ್ನು ಬಿಡುಗಡೆಗೊಳಿಸಲಾಗಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರಾದ ಅರ್ಚನಾ ಅವರನ್ನು ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಆದೇಶ ಹೊರಡಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: