ಮೈಸೂರು

ಸುತ್ತೂರು ಶ್ರೀಕ್ಷೇತ್ರದ ಶ್ರೀಕರ್ತೃಗದ್ದುಗೆಯಲ್ಲಿ ವಿಶೇಷ ಸಂಗೀತ ಕಾರ್ಯಕ್ರಮ

ಮೈಸೂರು,ಮೇ.13:- ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಸುತ್ತೂರು ಶ್ರೀಕ್ಷೇತ್ರದ ಶ್ರೀಕರ್ತೃಗದ್ದುಗೆಯಲ್ಲಿ  ಇತ್ತೀಚೆಗೆ   ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು ಹಾಗೂ ವಿಜಯಪುರ ಜ್ಞಾನಯೋಗಾಶ್ರಮದ ನಿರಾಭಾರಿ ಚರಮೂರ್ತಿಗಳಾದ   ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ  ವಿಶೇಷ ಸಂಗೀತ ಕಾರ್ಯಕ್ರಮ ನಡೆಯಿತು.

ಡಾ. ಮೈಸೂರು ಮಂಜುನಾಥ್ ಮತ್ತು ಮಾಸ್ಟರ್ ಸುಮಂತ್‍ ಅವರು ವಯಲಿನ್ ವಾದನ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ವಾನ್ ಬಿ.ಸಿ. ಮಂಜುನಾಥ್ ಮೃಂದಗದಲ್ಲಿ ವಿದ್ವಾನ್ ಪಿ. ರೂಪಕ ಕಲ್ಲೂರ್ ಕರ್‍ ಅವರು ತಬಲ ಸಹಕಾರ ನೀಡಿದರು. ಈ ಕಾರ್ಯಕ್ರಮದಲ್ಲಿ ಮೈಸೂರು ಹಾಗೂ ಸುತ್ತಮುತ್ತಲ ಗ್ರಾಮಗಳ ಶ್ರೋತೃಗಳು ಭಾಗವಹಿಸಿದ್ದರು. (ಎಸ್.ಎಚ್)

Leave a Reply

comments

Related Articles

error: