ಮೈಸೂರು

ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ನೇತೃತ್ವದಲ್ಲಿ ಗ್ಯಾಂಗ್ ರೇಪ್ ಪ್ರಕರಣದ ತನಿಖೆ : ರಿಂಗ್ ರಸ್ತೆಯ ಬಾರ್ ಗಳ ಮೇಲೆ ಹದ್ದಿನಕಣ್ಣು

ಮೈಸೂರು,ಮೇ.13:- ಮೈಸೂರಿನ ಶ್ರೀರಾಂಪುರ ರಿಂಗ್ ರಸ್ತೆಯ ನಿರ್ಜನ ಪ್ರದೇಶದಲ್ಲಿ ಇತ್ತೀಚೆಗೆ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಸುತ್ತಾಡಲು ತೆರಳಿದ್ದ ವಿವಾಹಿತ ಮಹಿಳೆಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ನಗರ ಪೊಲೀಸ್ ಆಯುಕ್ತ  ಕೆ.ಟಿ.ಬಾಲಕೃಷ್ಣ ಅವರ ನೇತೃತ್ವದಲ್ಲಿ ನಡೆಯುತ್ತಿದೆ.

ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪ್ರಕರಣದ ಗಂಭೀರತೆ ಪರಿಗಣಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ಲಿಂಗಾಂಬುಧಿ ಪಾಳ್ಯ ಟವರ್ ಲೊಕೇಷನ್ ಟ್ರೇಜ್ ಮಾಡಿರುವ ಪೊಲೀಸರು ಸುಮಾರು 200 ಮಂದಿಯನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಜಿಲ್ಲಾ ಪೊಲೀಸರು, ನಗರ ಪೊಲೀಸರ ಒಟ್ಟು 11 ತಂಡದಿಂದ ತನಿಖೆ ನಡೆಯುತ್ತಿದೆ. ಕೆ.ಆರ್. ವಿಭಾಗದ ಎಸಿಪಿ ಬಿ.ವಿ.ನಾಯಕ್ ಮುಂದಾಳತ್ವದಲ್ಲಿ ತನಿಖೆ ನಡೆಯುತ್ತಿದ್ದು, ರಿಂಗ್ ರಸ್ತೆಯ ಬಾರ್ ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿದ್ದಾರೆ. ಬಾರ್ ಗಳ ಸಿಸಿ ಕ್ಯಾಮರಾ, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: