ಕರ್ನಾಟಕಪ್ರಮುಖ ಸುದ್ದಿ

ಸಿದ್ಧರಾಮಯ್ಯ ವಿರುದ್ಧ ಟೀಕೆ: ಜೆಡಿಎಸ್ ವಿರುದ್ಧ ತಿರುಗಿ ಬಿದ್ದ ಕಾಂಗ್ರೆಸ್ ನಾಯಕರು

ಬೆಂಗಳೂರು (ಮೇ 13): ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು, ಶಾಸಕರು ಜೆಡಿಎಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವಂತೆ ಜೆಡಿಎಸ್ ಪಕ್ಷದ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಹೀಗಿದ್ದರೂ, ಆ ಪಕ್ಷದ ನಾಯಕರು ಮಾತನಾಡುತ್ತಿಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಗಂಭೀರ ಚರ್ಚೆ ಆಗಲೇಬೇಕು ಎಂದು ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ.

ಲೋಕಸಭೆ ಚುನಾವಣೆ ಮುಗಿದ ಬಳಿಕ ಜೆಡಿಎಸ್ ಮುಖಂಡರ ವರ್ತನೆ ಸರಿಯಿಲ್ಲ. ಆದರೆ, ಜೆಡಿಎಸ್ ವರಿಷ್ಠರು ಅವರನ್ನು ಕರೆದು ಎಚ್ಚರಿಕೆ ಕೊಡುತ್ತಿಲ್ಲ. ಕೇವಲ ನಮ್ಮವರಿಗೆ ಮಾತ್ರ ನಾವು ಕ್ಲಾಸ್ ತೆಗೆದುಕೊಳ್ಳುತ್ತಿದ್ದೇವೆ. ಇದನ್ನು ಸರಿಪಡಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ನಾಯಕರನ್ನು ದೇವೇಗೌಡರು ಹದ್ದುಬಸ್ತಿನಲ್ಲಿ ಇಡುತ್ತಿಲ್ಲ ಎಂದು ಜೆಡಿಎಸ್ ವರಿಷ್ಠರ ಮೌನದ ಬಗ್ಗೆ ಕಾಂಗ್ರೆಸ್ ನವರು ಅಸಮಾಧಾನ ಹೊರ ಹಾಕಿದ್ದಾರೆ. ದೇವೇಗೌಡರು, ಸಿಎಂ ಕುಮಾರಸ್ವಾಮಿ ತಮ್ಮ ಪಕ್ಷದ ನಾಯಕರನ್ನು ನಿಯಂತ್ರಿಸುತ್ತಿಲ್ಲ. ಪ್ರತಿ ದಿನ ಜೆಡಿಎಸ್ ಮುಖಂಡರು ಕಾಲು ಕೆರೆದುಕೊಂಡು ಹೇಳಿಕೆ ನೀಡುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಹೇಳಿಕೆ ನೀಡಿದ್ದ ವಿಚಾರ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ವಾಗ್ದಾಳಿಗೆ ಕಾರಣವಾಗಿದೆ. (ಎನ್.ಬಿ)

Leave a Reply

comments

Related Articles

error: