ಕರ್ನಾಟಕಮೈಸೂರು

ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನಹರಿಸಲಿ: ಟ್ವಿಟರ್‌ನಲ್ಲಿ ಸಿದ್ದರಾಮಯ್ಯ ವಾರ್ನಿಂಗ್!

ಬೆಂಗಳೂರು (ಮೇ 13): ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಅವರು ತಮ್ಮ ವಿರುದ್ಧ ಮಾತನಾಡಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್​ ಮೂಲಕವೇ ತಿರುಗೇಟು ನೀಡಿದ್ದಾರೆ. ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು ಎಂದು ಟ್ವಿಟರ್‌ನಲ್ಲಿ ಸಿದ್ದರಾಮಯ್ಯ ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ!

ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ,ಈಗ ವಿಶ್ವನಾಥ್, ಮುಂದೆ ಯಾರು ಗೊತ್ತಿಲ್ಲ! ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು ಎಂದು ಅವರು ಆಗ್ರಹಿಸಿದ್ದಾರೆ.

ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ, ಈಗ ವಿಶ್ವನಾಥ್… ಮುಂದೆ ಯಾರು ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು[email protected]
Siddaramaiah (@siddaramaiah) May 13, 2019

ಇದೇ ವೇಳೆ ಅವರು “ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಅವರು ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ” ಎಂದೂ ಸಹ ಸಿದ್ದರಾಮಯ್ಯ ಅವರು ಟ್ವಿಟ್​​ ಮಾಡಿದ್ದಾರೆ.

“ಸಿದ್ದರಾಮಯ್ಯ ಅವರು ತನ್ನ ಕಾಲದ ಆಡಳಿತ ಚೆನ್ನಾಗಿತ್ತು. 5 ವರ್ಷ ಪೂರೈಸಿದ ಸಿಎಂ ನಾನು ಎನ್ನುತ್ತಾರೆ. ಮತ್ಯಾಕೆ 130 ಇದ್ದ ಕಾಂಗ್ರೆಸ್ ಶಾಸಕರ ಸಂಖ್ಯಾಬಲ 78ಕ್ಕೆ ಇಳಿಯಿತು?” ಎಂದು ಪ್ರಶ್ನಿಸಿದ್ದರು. (ಎನ್.ಬಿ)

Leave a Reply

comments

Related Articles

error: