ಕರ್ನಾಟಕಮೈಸೂರು

ಕುಡಿಯುವ ನೀರು ಸಮಸ್ಯೆಗೆ ತ್ವರಿತ ಸ್ಪಂದಿಸಿ: ಸಚಿವ ಸಿ.ಎಸ್.ಪುಟ್ಟರಾಜು ಸೂಚನೆ

ಮಂಡ್ಯ (ಏ 13): ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ನಿಟ್ಟಿನಲ್ಲಿ ಇದನ್ನು ತಡೆಯಲು ಇಲಾಖೆಯ ಅಧಿಕಾರಿಗಳು ತ್ವರಿತ ಗತಿಯಲ್ಲಿ ಕ್ರಮವಹಿಸಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದರು.

ಅವರು ಇಂದು (ಏ.13) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಂಡ್ಯ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಡ್ಯ ಜಿಲ್ಲೆಯ ವಾಡಿಕೆ ಮಳೆಯ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದ ಏಪ್ರಿಲ್ ತಿಂಗಳಲ್ಲಿ ಬಿದ್ದಿರುವ ಮಳೆಗೆ ಹೋಲಿಸಿದರೆ ಈ ವರ್ಷ ಏಪ್ರಿಲ್ ತಿಂಗಳಲ್ಲಿ ಮಳೆ ಬಿದ್ದಿರುವ ಪ್ರಮಾಣ ಕಡಿಮೆಯಾಗಿದ್ದು ಅಧಿಕಾರಿಗಳು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ರೈತರಿಗೆ ಬೆಳೆ ಹಾನಿ ಸಂಬಂಧಿಸಿದಂತೆ ಸರ್ವೇ ಮಾಡಿ ಕೂಡಲೇ ಪರಿಹಾರ ವಿತರಣೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಸಚಿವರು ತಿಳಿಸಿದರು.

ಕುಡಿಯುವ ನೀರು ಕಾಮಗಾರಿಗಳಿಗೆ ಸಂಬಂಧಿಸಿದಂತೆ 3 ಹಂತದ ಟಾಸ್ಕ್ ಪೋರ್ಸ್‍ನಲ್ಲಿ ಹಣ ಮಂಜೂರಾಗಿದೆ. ಪ್ರಥಮ ಹಂತವಾಗಿ ರೂ 300 ಲಕ್ಷ ಅನುದಾನ 185 ಕುಡಿಯುವ ನೀರು ಕಾಮಗಾರಿಗಳಿಗೆ ಮಂಜೂರಾಗಿದ್ದು 180 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಎರಡನೇ ಹಂತವಾಗಿ ರೂ 350 ಲಕ್ಷ 187 ಕುಡಿಯುವ ನೀರಿನ ಕಾಮಗಾರಿಗಳಿಗೆ ಮಂಜೂರಾಗಿದ್ದು 161 ಕಾಮಗಾರಿಗಳು ಪೂರ್ಣಗೊಂಡಿದೆ ಹಾಗೂ 24 ಕಾಮಗಾರಿಗಳು ಪ್ರಗತಿಯ ಹಂತದಲ್ಲಿರುತ್ತದೆ. ಮೂರನೇ ಹಂತವಾಗಿ ರೂ 325 ಲಕ್ಷ 160 ಕುಡಿಯುವ ನೀರು ಕಾಮಗಾರಿಗಳಿಗೆ ಹಣ ಮಂಜೂರಾಗಿದ್ದು 160 ಕಾಮಗಾರಿಗಳು ಪ್ರಗತಿಯ ಹಂತದಲ್ಲಿರುತ್ತದೆ ಎಂದು ಗ್ರಾಮೀಣಾ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯಪಾಲಕ ಅಭಿಯಂತರಾದ ರಾಮಕೃಷ್ಣ ಅವರು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಸಚಿವರು ಕುಡಿಯುವ ನೀರಿಗೆ ಸಂಬಂಧಿಸಿದಂತೆ ನಾಗಮಂಗಲ ತಾಲ್ಲೂಕಿನಲ್ಲಿ 62 ಗ್ರಾಮಗಳಿಗೆ, ಕೆ.ಆರ್.ಪೇಟೆ ತಾಲ್ಲೂಕಿನ 1 ಗ್ರಾಮಕ್ಕೆ, ಮದ್ದೂರು ತಾಲ್ಲೂಕಿನ 1 ಗ್ರಾಮಕ್ಕೆ ಹಾಗೂ ಪಾಂಡವಪುರ ತಾಲ್ಲೂಕಿನ 1 ಗ್ರಾಮ ಸೇರಿದಂತೆ ಒಟ್ಟು 65 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಕುಡಿಯುವ ಸಮಸ್ಯೆ ಇರುವ ಕಡೆ ಖಾಸಗಿ ಬೋರ್‍ವೆಲ್ ಮೂಲಕ ಕೂಡ ಕುಡಿಯುವ ನೀರು ನೀಡಬೇಕು ಮತ್ತು ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗಮನಹರಿಸಬೇಕು ಹಾಗೂ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ತೊಂದರೆಯಾಗಂತೆ ಚೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಸಚಿವರು ತಿಳಿಸಿದರು.

32 ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇದ್ದು ಜಾನುವಾರುಗಳಿಗೆ ಮೇವಿನ ಕೊರತೆ ಇರುವುದಿಲ್ಲ. ಮಳೆಯಿಂದ ಆದಾ ಮನೆ ಹಾನಿಗೆ ಹಾಗೂ ಬೆಳೆ ಹಾನಿ ಸಂಬಂಧಿಸಿದಂತೆ ಸರ್ಕಾರದ ನಿಯಮದಂತೆ ತಕ್ಷಣವೇ ಪರಿಹಾರವನ್ನು ನೀಡಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದ ಸಚಿವರು ಅಲ್ಲದೇ ತೋಟಗಾರಿಕೆ, ಕೃಷಿ ಇಲಾಖೆ ಹಾಗೂ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‍ಗಳು ಮಳೆಯಿಂದ ಆದಾ ಬೆಳೆ ಹಾನಿ ಹಾಗೂ ಮನೆ ಹಾನಿಗಳಿಗೆ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ವೆ ನಡೆಸಿ ವಿವರವಾದ ನೈಜ ವರದಿಯನ್ನು ಸಿದ್ಧಪಡಿಸಿ 1 ವಾರದೊಳಗೆ ನೀಡುವಂತೆ ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಪಿ.ಸಿ.ಜಾಫರ್ ಅವರು ನಾಗಮಂಗಲ ತಾಲ್ಲೂಕಿನಲ್ಲಿ ಕುಡಿಯುವ ನೀರನ ಸಮಸ್ಯೆ ಹೆಚ್ಚಾಗಿದ್ದು ಅಲ್ಲಿನ ಜನರಿಗೆ ನರೇಗಾ ಯೋಜನೆಯಡಿ ಉದ್ಯೋಗ ನೀಡಬೇಕು. ಅಲ್ಲದೇ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಒಂದು ವಾರ ಮೊದಲೇ ಕುಡಿಯುವ ನೀರಿನ ಸಮಸ್ಯೆಯನ್ನು ಅಂದಾಜಿಸಿ ಇಂದೇ ಅದಕ್ಕೆ ಅಗತ್ಯ ಕ್ರಮವಹಿಸಬೇಕು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎನ್.ಡಿ.ಪ್ರಕಾಶ್, ಮಂಡ್ಯ ಉಪವಿಭಾಗಧಿಕಾರಿಗಳಾದ ರಾಜೇಶ್, ಪಾಂಡವಪುರ ಉಪ ವಿಭಾಗಧಿಕಾರಿಗಳಾದ ಶೈಲಜಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. (ಎನ್.ಬಿ)

Leave a Reply

comments

Related Articles

error: