ಮೈಸೂರು

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಯುವಕನೋರ್ವ ಆಟವಾಡುತ್ತಿದ್ದ ಪಕ್ಕದ ಮನೆಯ ಆರು ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರವೆಸಗಿದ ಬಳಿಕ ಬೆದರಿಕೆಯೊಡ್ಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮಚ್ಚರೆ ಗ್ರಾಮದಲ್ಲಿ ನಡೆದಿದೆ.

ಮಚ್ಚರೆ ಗ್ರಾಮದ 21 ವರ್ಷದ ಮಹದೇವ ಪರಾರಿಯಾದ ಯುವಕ ಎನ್ನಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೋಲೆಟ್ ಕೊಡಿಸುವ ಆಮಿಷವೊಡ್ಡಿ ಕರೆದೊಯ್ದ ಮಹದೇವ, ಅಲ್ಲಿಂದ ಸ್ವಲ್ಪ ದೂರ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಬಳಿಕ ಯಾರಿಗಾದರೂ ಈ ವಿಷಯ ಹೇಳಿದರೆ ಸಾಯಿಸುವುದಾಗಿ ಬೆದರಿಕೆಯೊಡ್ಡಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಸ್ಥಳದಿಂದ ಅಳುತ್ತ ಮನೆಗೆ ಬಂದ ಬಾಲಕಿ, ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ತಾಲೂಕಿನ ಬೀಚನಹಳ್ಳಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

Leave a Reply

comments

Related Articles

error: