ಮೈಸೂರು

ಮೊಬೈಲ್ ಕದ್ದು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮೈಸೂರು,ಮೇ.14:- ಮೊಬೈಲ್ ಕದ್ದು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತನನ್ನು ಚಾಮರಾಜನಗರದ ಗಾಳಿಪುರ ನಿವಾಸಿ ಬಾಬು ಎಂದು ಗುರುತಿಸಲಾಗಿದೆ. ಈತ ಕಳ್ಳತನ ಮಾಡಿದ್ದ ಮೊಬೈಲ್ ನ್ನು ನಗರದ ಕೆ.ಟಿ.ಸ್ಟ್ರೀಟ್ ನಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಬಂಧಿತನಿಂದ 50ಸಾವಿರ ರೂ.ಬೆಲೆಬಾಳುವ ಎರಡು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: