ಮೈಸೂರು

ಫೆ.6-14: ಗೀತ ಗಾನಯಾನ

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಪಿಸಿರುವ ಶಾಲೆಗಳಲ್ಲಿ ಸಂಗೀತ ಪಠ್ಯಕೃತಿಗಳ ಗೀತ ಗಾನಯಾನ ಕಾರ್ಯಕ್ರಮವನ್ನು ಫೆ. 6 ರಿಂದ 14ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಪ್ಪ ತಿಳಿಸಿದರು.

ಜಿಲ್ಲಾಧಿಕಾರಿಗಳ  ಕಚೇರಿ ಸಭಾಂಗಣದಲ್ಲಿ  ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನಾಡಿನ ವಿವಿಧ ಕಲಾ ಪ್ರಕಾರಗಳಾದ  ಶಾಸ್ತ್ರೀಯ ಸಂಗೀತ, ವಚನ ವೈಭವ, ದಾಸ ಸಾಹಿತ್ಯದ ಹಿರಿಮೆ, ಗಮಕ ಪರಿಚಯ, ನಾಡಗೀತೆಯನ್ನು ಕಲಿಸಲಾಗುತ್ತದೆ ಎಂದರು.

60 ನಿಮಿಷಗಳ ಗೀತ ಗಾಯನವು ಪ್ರತಿ ತಾಲ್ಲೂಕಿನಲ್ಲಿ ಎರಡು ದಿನದಲ್ಲಿ 6 ರಂತೆ 8 ತಾಲ್ಲೂಕುಗಳಲ್ಲಿ 48 ಕಾರ್ಯಕ್ರಮ ನಡೆಸಲಾಗುತ್ತದೆ. 50 ಸಾವಿರ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ತಲುಪಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಕಪಿಲಾ ಯಾನ ಮತ್ತು ಕಾವೇರಿ ಯಾನ ಎಂಬ ಎರಡು ಸಂಚಾರಿ ವಾಹನಗಳನ್ನು ಬಳಸಿಕೊಳ್ಳಲಾಗಿದ್ದು, ಕಪಿಲಾ ಯಾನವು ಮೈಸೂರು ಗ್ರಾಮಾಂತರ, ಟಿ.ನರಸೀಪುರ, ನಂಜನಗೂಡು ತಾಲ್ಲೂಕು, ಎಚ್.ಡಿ.ಕೋಟೆ ತಾಲ್ಲೂಕುಗಳಲ್ಲಿ ಸಂಚರಿಸಲಿದೆ.

ಕಾವೇರಿಯಾನವು ಕೆ.ಆರ್.ನಗರ, ಹುಣಸೂರು, ಪಿರಿಯಾಪಟ್ಟಣ  ಮತ್ತು ಮೈಸೂರು ನಗರಗಳಲ್ಲಿ ಸಂಚರಿಸಲಿದೆ.

ಕಾರ್ಯಕ್ರಮವನ್ನು ಫೆ.6 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಅಲ್ಪಸಂಖ್ಯಾತ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್ ವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ  ಜಿಲ್ಲಾಧಿಕಾರಿ ಡಿ.ರಂದೀಪ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ  ರಾಜು, ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: