ಮೈಸೂರು

ಸಾಮಾಜಿಕ ಜಾಲತಾಣದಲ್ಲಿ ಅವಹೇಳನ : ಗ್ರಾ.ಪಂ.ಉಪಾಧ್ಯಕ್ಷರ ಮೇಲೆ ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ  ಗ್ರಾಮಪಂಚಾಯತ್ ಉಪಾಧ್ಯಕ್ಷೆ ಹಾಗೂ ಅಧ್ಯಕ್ಷರ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಶ್ರೀರಾಂಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಚೂಡಾಮಣಿ ಹಾಗೂ ಉಪಾಧ್ಯಕ್ಷೆ ಉಷಾ ಇದೀಗ ಠಾಣೆಯ ಮೆಟ್ಟಿಲೇರಿದ್ದಾರೆ. ಉಪಾಧ್ಯಕ್ಷೆ ಉಷಾ ಸಾಮಾಜಿಕ ಜಾಲತಾಣದಲ್ಲಿ ಅಧ್ಯಕ್ಷರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ. ಇದನ್ನು ನೋಡಿದ ಹಲವರು ಅಧ್ಯಕ್ಷರಿಗೆ ದೂರವಾಣಿ ಮೂಲಕ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದ ಅಧ್ಯಕ್ಷರು ಉಷಾ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ನೀವು ಸಾಮಾಜಿಕ ಜಾಲತಾಣದಲ್ಲಿ ನನ್ನ ಕುರಿತು ಅವಹೇಳನಕಾರಿಯಾಗಿ ಹೇಳಿದ್ದೀರಂತೆ ಎಂದು ಕೇಳಿದಾಗ ಅವರು ಹೌದು ಎಂದಿದ್ದಾರೆ. ಬಳಿಕ ಇಬ್ಬರೂ ದೂರವಾಣಿಯಲ್ಲಿ ಜಗಳ ಕಾದಿದ್ದಾರೆ. ಇದರಿಂದ ಅಧ್ಯಕ್ಷರು ಉಷಾ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಬ್ ಇನ್ಸಪೆಕ್ಟರ್ ಜಯಪ್ರಕಾಶ್ ದೂರು ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

comments

Related Articles

error: