ಮೈಸೂರು

ಪಾರ್ಕಿಂಗ್ ವಿಚಾರಕ್ಕೆ ಹಲ್ಲೆ

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆಕೆಯ ಮಗನ ಮೇಲೆ ವ್ಯಕ್ತಿಯೋರ್ವರು ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಹಲ್ಲೆಗೊಳಗಾದಾಕೆಯನ್ನು ಮಂಡಿಮೊಹಲ್ಲಾ ನಿವಾಸಿ ಯಶೋದಾ ಹಾಗೂ ಆಕೆಯ ಮಗ ಹರೀಶ್ ಎಂದು ಗುರುತಿಸಲಾಗಿದೆ. ಪಕ್ಕದ ಮನೆಯ ಹೇಮಂತ್ ಎಂಬವನೇ ಹಲ್ಲೆ ನಡೆಸಿದ ವ್ಯಕ್ತಿಯಾಗಿದ್ದಾನೆ.  ಗಾಡಿ ಇಡುವ ಕುರಿತಂತೆ ಮೂವರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಹೇಮಂತ್ ಇಬ್ಬರಿಗೂ ರಾಡ್ ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಮಂಡಿಮೊಹಲ್ಲಾ ಠಾಣೆಯ ಇನ್ಸಪೆಕ್ಟರ್ ತಲ್ವಾರ್ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಗಾಯಗೊಂಡ ಯಶೋದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

comments

Related Articles

error: