ಕರ್ನಾಟಕ

ಮೇ 18 : ಮಂಡ್ಯಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರಾಜ್ಯ ಸಮಿತಿ ಅಧ್ಯಕ್ಷರ ಪ್ರವಾಸ

ಮಂಡ್ಯ (ಮೇ 17): ಘನತ್ಯಾಜ್ಯ ವಸ್ತು ನಿರ್ವಾಹಣೆ ನಿಯಮಗಳ 2016 ರ ಅನುಷ್ಠಾನದ ಬಗ್ಗೆ ಪರಿಶೀಲಿಸಲು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷರಾದ ಸುಭಾಷ್ ಬಿ.ಅಡಿ (ನಿವೃತ ನ್ಯಾಯಾಧೀಶರು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಮತ್ತು ಉಪಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ) ಅವರು ಮಂಡ್ಯ ಜಿಲ್ಲೆಗೆ ಮೇ 18 ರಂದು ಆಗಮಿಸುವರು.

ಅವರು ಅಂದು ಬಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸುವರು ಎಂದು ಜಿಲ್ಲಾಧಿಕಾರಿಗಳಾದ ಡಾ.ಪಿ.ಸಿ.ಜಾಫರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: