ಪ್ರಮುಖ ಸುದ್ದಿ

ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ರಾಜ್ಯ(ಮಡಿಕೇರಿ) ಮೇ 18 :- ಮಡಿಕೇರಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಗದ್ದಿಗೆ ಹಾಗೂ ಗಾಳಿಬೀಡು ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮೇ 18 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ಸಂಪಿಗೆಕಟ್ಟೆ, ಗದ್ದಿಗೆ, ಎವಿ ಶಾಲೆ, ಮಹದೇವಪೇಟೆ, ಹಿಲ್‍ರಸ್ತೆ, ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಭಗವತಿನಗರ, ಹೆಬ್ಬೆಟ್ಟಗೇರಿ, ಗಾಳಿಬೀಡು, ಕಾಲೂರು ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.
ಮಡಿಕೇರಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಕೋಟೆ ಹಾಗೂ ರಾಜಾಸೀಟು ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮೇ, 19 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ಚೈನ್‍ಗೇಟ್, ಸುದರ್ಶನ ವೃತ್ತ, ಜಯನಗರ, ಮೈಸೂರು ರಸ್ತೆ, ಕಾಲೇಜು ರಸ್ತೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ರಾಜಾಸೀಟು, ಹೊಸಬಡಾವಣೆ, ಎಫ್.ಎಂ.ಸಿ ಕಾಲೇಜು ಸುತ್ತಮುತ್ತ, ವಿದ್ಯಾನಗರ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: