ಕರ್ನಾಟಕಪ್ರಮುಖ ಸುದ್ದಿ

ರಾಜ್ಯದ 18 ಕ್ಷೇತ್ರ ಗೆಲುವು: ತಿರುಪತಿಯಲ್ಲಿ ಸಿಎಂ ಎಚ್‍ಡಿಕೆ ಭವಿಷ್ಯ

ಬೆಂಗಳೂರು/ತಿರುಪತಿ (ಮೇ 18): ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟವು ರಾಜ್ಯದ 18 ಕ್ಷೇತ್ರಗಳಲ್ಲಿ ಗೆಲ್ಲುವು ಸಾಧಿಸಲಿದೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು 87ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಯಲ್ಲಿ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ನಾವು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾತು ಕೊಟ್ಟಿದ್ದೇವೆ. ಅದರಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟವು ರಾಜ್ಯದಲ್ಲಿ 18 ಸ್ಥಾನ ಗೆಲ್ಲಲಿದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. (ಎನ್.ಬಿ)

Leave a Reply

comments

Related Articles

error: