ಪ್ರಮುಖ ಸುದ್ದಿ

ಅಪರೂಪದ ಛಾಯಾಚಿತ್ರ ಪ್ರದರ್ಶನಕ್ಕೆ ಮಡಿಕೇರಿ ಕೋಟೆಯಲ್ಲಿ ಚಾಲನೆ

ರಾಜ್ಯ(ಮಡಿಕೇರಿ) ಮೇ 19:- ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯ ಪ್ರಯುಕ್ತ ಸರ್ಕಾರಿ ವಸ್ತುಸಂಗ್ರಹಾಲಯ ವತಿಯಿಂದ ಶನಿವಾರ ನಗರದ ಕೋಟೆ ಆವರಣದಲ್ಲಿ ಏರ್ಪಡಿಸಿದ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಉದ್ಘಾಟಿಸಿದರು.
ಕ್ರಿ.ಶ 1730 ರಿಂದ ಕ್ರಿ.ಶ 1907 ಕಾಲಕ್ಕೆ ಸೇರಿದ ಕೊಡಗು ಜಿಲ್ಲೆಯ ವಿವಿಧ ಐತಿಹಾಸಿಕ ಸ್ಥಳಗಳು ಮತ್ತು ಕಟ್ಟಡಗಳ ಛಾಯಚಿತ್ರಗಳ ಪ್ರದರ್ಶನವು ಎರಡು ದಿನಗಳ ಕಾಲ ನಡೆಯಲಿದ್ದು, ಸಾರ್ವಜನಿಕರು, ಪ್ರವಾಸಿಗರು ವೀಕ್ಷಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಇತಿಹಾಸಿಕ ಪರಂಪರೆ ಬಿಂಬಿಸುವ ಅನೇಕ ಸ್ಥಳಗಳಿದ್ದು, ಅವುಗಳ ಬಗ್ಗೆ ಮಾಹಿತಿಗಳು ಈ ಛಾಯಾಚಿತ್ರ ಪ್ರದರ್ಶನದಲ್ಲಿ ದೊರೆಯಲಿದೆ. ಎಂದು ಅವರು ತಿಳಿಸಿದರು.
ಸರ್ಕಾರಿ ವಸ್ತು ಸಂಗ್ರಹಾಲಯದ ಅಧಿಕಾರಿ ಬಿ.ಪಿ.ರೇಖಾ ಅವರು ಮಾತನಾಡಿ ಸುಮಾರು 28 ಸಾಂಸ್ಕೃತಿಕ ಹಾಗೂ ಪಾರಂಪರಿಕ ಛಾಯಾಚಿತ್ರಗಳನ್ನು ಇಡಲಾಗಿದ್ದು, ಪ್ರವಾಸಿಗರು, ಮೇ 19 ರ ವರೆಗೆ ಚಾಯಾಚಿತ್ರ ಪ್ರದರ್ಶನ ವೀಕ್ಷಣೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: