ಕರ್ನಾಟಕ

ಬಿರುಗಾಳಿ ಮಳೆಗೆ ಬೆಚ್ಚಿಬಿದ್ದ ಚಿತ್ರದುರ್ಗದ ಜನ!

ಚಿತ್ರದುರ್ಗ (ಮೇ 21): ಬಿರುಗಾಳಿ ಸಹಿತ ಸುರಿದ ಮಳೆಗೆ ಕೋಟೆ ನಾಡಿನ ಜನರು ತತ್ತರಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಭಾರಿ ಗಾಳಿಗೆ ಪಪ್ಪಾಯಿ ಬೆಳೆ ಸಂಪೂರ್ಣ ನಾಶವಾಗಿದೆ. ರೈತ ತಿಪ್ಪೇಸ್ವಾಮಿ ಬೆಳೆದಿದ್ದ ಪಪ್ಪಾಯಿ ಬೆಳೆ ನೆಲಕಚ್ಚಿದೆ. 4 ಎಕರೆ ಜಮನಿನಲ್ಲಿ ಪಪ್ಪಾಯಿ ಬೆಳೆದಿದ್ದರು ರೈತ. ಮುಂಗಡ ಹಣ ಪಡೆದು ಸಂಕಷ್ಟಕ್ಕೆ ಸಿಲುಕಿರುವ ರೈತ ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.

ಭಾರಿ ಗಾಳಿ ಮಳೆಯಿಂದ ಸುಮಾರು 5 ಲಕ್ಷದಷ್ಟು ನಷ್ಟ ಉಂಟಾಗಿದೆ. ಇತರ ಬೆಳೆಗಾರರಿಗೂ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಸ್ಥಳಕ್ಕೆ ತೋಟಗಾರಿಕಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ಎನ್.ಬಿ)

Leave a Reply

comments

Related Articles

error: