ದೇಶಮೈಸೂರು

ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಆಸ್ಪತ್ರೆಗೆ ದಾಖಲು

ನಿರ್ಜಲೀಕರಣ (ಡಿಹೈಡ್ರೇಷನ್) ಸಮಸ್ಯೆ ಮತ್ತು ಜ್ವರದಿಂದ ಬಳಲುತ್ತಿರುವ ಕಾರಣ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಗುರುವಾರ ರಾತ್ರಿ 11.30ಕ್ಕೆ ದಾಖಲಾದ ಜಯಲಲಿತಾ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮುಖ್ಯ ನಿರ್ವಹಣಾ ಅಧಿಕಾರಿ ಸುಬ್ಬಯ್ಯ ವಿಶ್ವನಾಥನ್ ತಿಳಿಸಿದ್ದಾರೆ.

ಸಿಎಂ ಜಯಲಲಿತಾ ಆಸ್ಪತ್ರೆಗೆ ದಾಖಲಾದ ವಿಷಯ ತಿಳಿಯುತ್ತಿದ್ದಂತೆ ಅಪೋಲೋ ಆಸ್ಪತ್ರೆ ಮುಂದೆ ನೂರಾರು ಅಭಿಮಾನಿಗಳು ಜಮಾಯಿಸಿದ ಕಾರಣ ಜನಜಂಗುಳಿ ಏರ್ಪಟ್ಟಿತ್ತು. ಅಭಿಮಾನಿಗಳು ಜಯಲಲಿತಾ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.

ಸಿದ್ದರಾಮಯ್ಯ ಹಾರೈಕೆ: ಆಸ್ಪತ್ರೆಗೆ ದಾಖಲಾಗಿರುವ ಜಯಲಲಿತಾ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Leave a Reply

comments

Related Articles

error: