ಸುದ್ದಿ ಸಂಕ್ಷಿಪ್ತ

ಗಾಣಿಗ ಸಮಾಜದ ‘ಪ್ರತಿಭಾ ಪುರಸ್ಕಾರ’ ಅರ್ಜಿ ಆಹ್ವಾನ

ಮೈಸೂರು,ಮೇ.22 : ಎಸ್.ಎಸ್.ಎಲ್.ಸಿ ಮತ್ತು ಪಿಯು ನಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ.85ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆಯನ್ನು ಗಾಣಿಗ ಎಜುಕೇಷನಲ್ ಆಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿದೆ.

ಆದ್ದರಿಂದ ಮೈಸೂರು ಜಿಲ್ಲಾ ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. (www.sreeganigatrust.org), ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಯನ್ನು ಅಪ್ ಲೋಡ್ ಮಾಡಿ ಅರ್ಜಿಗಳನ್ನು ಜೂ.4ರೊಳಗೆ ಸಲ್ಲಿಸಬೇಕೆಂದು ಕೋರಲಾಗಿದೆ. ವಿವರಗಳಿಗೆ ಮೊ.ಸಂ. 9036623608, 9900818151 ಅನ್ನು ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: