ಪ್ರಮುಖ ಸುದ್ದಿ

ಸೂಕ್ಷ್ಮ ಪ್ರದೇಶಗಳಲ್ಲಿ ನೋಡಲ್ ಅಧಿಕಾರಿಗಳಿಂದ ವಿಶೇಷ ಗ್ರಾಮ ಸಭೆ

ರಾಜ್ಯ(ಮಡಿಕೇರಿ) ಮೇ 23 :- ಪ್ರಕೃತಿ ವಿಕೋಪ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ವಿಶೇಷ ಗ್ರಾಮಸಭೆ ನಡೆಸಿ, ಪ್ರಕೃತಿ ವಿಕೋಪ ಸಂಭವಿಸಿದ್ದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಸೂಕ್ಷ್ಮ ಪ್ರದೇಶಗಳ ಮನೆಗಳಿಗೆ ಗ್ರಾಮ ಲೆಕ್ಕಿಗರು ಹಾಗೂ ಪಿಡಿಒಗಳೊಂದಿಗೆ ಭೇಟಿ ನೀಡಿ ಕುಟುಂಬಗಳ ವಿವರ ಸಂಗ್ರಹಿಸುವುದರ ಜೊತೆಗೆ, ಪ್ರಕೃತಿ ವಿಕೋಪ ಎದುರಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮಗಳು ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯಲ್ಲಿ ನಡೆಯುತ್ತಿದೆ.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: