ಮೈಸೂರು

ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ : ಸೋಮಶೇಖರ್

ಮೈಸೂರಿನ ಸ್ನೇಹ ಸಿಂಚನ ಟ್ರಸ್ಟ್ ಸಮಾಜದ ಗಣ್ಯ  ವ್ಯಕ್ತಿಗಳನ್ನು ಹಾಗೂ ಪ್ರತಿಭಾನ್ವಿತ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವುದರ ಮೂಲಕ ಇತರರಿಗೆ ಮಾದರಿ ಎನಿಸಿದೆ ಎಂದು ಕೆ.ಆರ್.ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ತಿಳಿಸಿದರು.

ಅಗ್ರಹಾರದಲ್ಲಿ ಆಯೋಜಿಸಿದ್ದ ಮೈಸೂರು ರತ್ನ ಹಾಗೂ ಮೈಸೂರು ಪ್ರತಿಭಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿರುವವರ ಜೊತೆಜೊತೆಯಲ್ಲೇ ಮತ್ತಷ್ಟು ಪ್ರತಿಭೆಗಳನ್ನು ಹೆಕ್ಕಿ ಹೊರತೆಗೆಯುವ ನಿಟ್ಟಿನಲ್ಲಿ ಸಂಸ್ಥೆಯು ಹಲವಾರು ಸ್ಪರ್ಧೆಗಳನ್ನು ನಡೆಸಿ ಅದರಲ್ಲಿ ವಿಜೇತರಾದವರಿಗೆ ಹಾಗೂ ನವರಾತ್ರಿ ಗೊಂಬೆ ಜೋಡಣೆಯ ಸ್ಪರ್ಧಿಗಳಿಗೂ ಬಹುಮಾನ ವಿತರಿಸಿರುವುದು ಶ್ಲಾಘನೀಯ ಎಂದರು.

ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸರ್ವಮಂಗಳ ಶಂಕರ್ ಮಾತನಾಡಿ ವಿವಿಧ ಸ್ಪರ್ಧೆಗಳ ಮೂಲಕ ಮತ್ತಷ್ಟು ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ನಡೆಸುತ್ತಿರುವ ಸಂಸ್ಥೆಯು ಮತ್ತಷ್ಟು ಪ್ರಖ್ಯಾತಿ ಗಳಿಸಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಂಗೀಪುರಂನ ಮಠಾಧಿಪತಿ ಇಳೈ ಆಲ್ವಾರ್ ಸ್ವಾಮೀಜಿ, ನಗರಪಾಲಿಕೆ ಸದಸ್ಯ ಸ್ನೇಕ್ ಶ್ಯಾಂ, ಎಂ.ಬಿ.ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.

 

 

Leave a Reply

comments

Related Articles

error: