ಮೈಸೂರು

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಕರ್ನಾಟಕ ಲೋಕಸೇವಾ ಆಯೋಗವು 2017 ಸಾಲಿನ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ನಗರದ 60 ಪರೀಕ್ಷಾ ಕೇಂದ್ರಗಳಲ್ಲಿ ಫೆ.11 ಮತ್ತು 12 ರಂದು ಪರೀಕ್ಷೆ ನಡೆಸಲಿದೆ.

ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಗರದ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ಆದೇಶ ಹೊರಡಿಸಿದ್ದಾರೆ.

ಕಲಂ 144 ರ ಸಿ ಆರ್ ಪಿ ಸಿ ಪ್ರಕಾರ ಈ ಆದೇಶವನ್ನು ಹೊರಡಿಸಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಇರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ, ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ 200 ಮೀ.ವ್ಯಾಪ್ತಿಯಲ್ಲಿ ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದೆಂದು ಅವರು ಆದೇಶ ನೀಡಿದ್ದಾರೆ.

Leave a Reply

comments

Related Articles

error: