ಮೈಸೂರು

ಮೈಸೂರಿನಲ್ಲಿ ಚಲನಚಿತ್ರೋತ್ಸವ ಸಮಾರೋಪ ಫೆ.9 ರಂದು

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಫೆ.3 ರಿಂದ ಆಯೋಜಿಸಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭವನ್ನು ಫೆ.9 ರಂದು ಗುರುವಾರ ಸಂಜೆ 6.30 ಕ್ಕೆ ಅರಮನೆ ಮುಂಭಾಗದಲ್ಲಿ ಏರ್ಪಡಿಸಲಾಗಿದೆ.

ಈ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಹಾಗೂ ಖ‍್ಯಾತ ನೃತ್ಯ ಕಲಾವಿದೆ ನಿರುಪಮಾ ರಾಜೇಂದ್ರ ತಂಡದವರಿಂದ ನೃತ್ಯ ರೂಪಕ ಹಾಗೂ ಚಲನಚಿತ್ರ ಕಲಾವಿದರ ತಂಡದಿಂದ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ಧನ್ವಂತ್ರಿ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಫೆ.7 ರಂದು ಸಾರ್ವಜನಿಕರಿಗೆ ಉಚಿತವಾಗಿ ಕಾರ್ಯಕ್ರಮದ ಪಾಸ್ ವಿತರಣೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: