ಕರ್ನಾಟಕ

ಪಾರಂಪರಿಕ ಕಲೆಗಳ ತರಬೇತಿಗೆ ಅರ್ಜಿ ಆಹ್ವಾನ

ಹಾಸನ (ಮೇ 27): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿಗೆ ಪ್ರವರ್ಗ- 2ಎ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ತರಬೇತಿ ನೀಡಲಾಗುವುದು.
ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಸನ ಇವರಿಂದ ಪಡೆದು ಭರ್ತಿ ಮಾಡಿ ಜೂನ್ 4 ರೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಚೇರಿಗೆ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್‍ನ್ನು ಅಥವಾ ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸನ — ಇವರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ. (ಎನ್.ಬಿ)

Leave a Reply

comments

Related Articles

error: