ಮೈಸೂರು

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ 15000 ಲೀಟರ್ ಶುದ್ಧ ಕುಡಿಯುವ ನೀರು ರವಾನೆ

ಮೈಸೂರು,ಮೇ 27-ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಸಹಯೋಗದೊಂದಿಗೆ ಮೈಸೂರು ಜಿಲ್ಲಾ ಪ್ಯಾಕೇಜಿಂಗ್ ಡ್ರಿಂಕಿಂಗ್ ವಾಟರ್ ಮ್ಯಾನುಫ್ಯಾಕ್ಟರ್ ಅಸೋಸಿಯೇಷನ್ ವತಿಯಿಂದ ಶುದ್ಧ ಕುಡಿಯುವ ನೀರನ್ನು ಕಳುಹಿಸಿಕೊಡಲಾಯಿತು.

15000 ಲೀಟರ್ ಶುದ್ಧ ಕುಡಿಯುವ ನೀರಿನ ಬಾಟೆಲ್ ಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಜೆ.ಜವರೇಗೌಡ, ಜಿಲ್ಲಾಧ್ಯಕ್ಷ ಎಸ್.ದೇವರಾಜು ಇತರರು ಉಪಸ್ಥಿತರಿದ್ದರು. (ಎಂ.ಎನ್)

Leave a Reply

comments

Related Articles

error: