ಸುದ್ದಿ ಸಂಕ್ಷಿಪ್ತ

ಕ್ರೀಡಾ ವಿದ್ಯಾರ್ಥಿಗಳಿಗೆ ವೇತನ: ಅರ್ಜಿ ಆಹ್ವಾನ

ಮಂಡ್ಯ (ಮೇ 27): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 01-01-2018 ರಿಂದ 31-03-2019 ರವರೆಗೆ ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು/ಸಾರ್ವಜನಿಕ ಶಿಕ್ಷಣ ಇಲಾಖೆ/ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಡೆಸಿದ ರಾಜ್ಯ ಮಟ್ಟದ (ಗ್ರಾಮೀಣ ಕ್ರೀಡಾಕೂಟ/ಮಹಿಳಾ ಕ್ರೀಡಾಕೂಟ) ಕ್ರೀಡಾಕೂಟಗಳಲ್ಲಿ ಪ್ರಥಮಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರುವ ಅಥವಾ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಂತಹ 06 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಮಾಧ್ಯಮಿಕ/ ಫ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ ರೂ.10000/-ಗಳ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿ ಕ್ರೀಡಾಪಟುಗಳು ಆನ್‍ಲೈನ್‍ನಲ್ಲಿ ದಿನಾಂಕ.30-06-2019 ರ ಒಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಯುವ ಜನಾ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: