ಸುದ್ದಿ ಸಂಕ್ಷಿಪ್ತ

ಪ್ರತಿಭಾವಂತ ಮಾಧ್ಯಮಿಕ, ಫ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಅರ್ಜಿ ಆಹ್ವಾನ

ಮಂಡ್ಯ (ಮೇ 27): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 01-01-2018 ರಿಂದ 31-03-2019 ರವರೆಗೆ ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು,ಸಾರ್ವಜನಿಕ ಶಿಕ್ಷಣ ಇಲಾಖೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಡೆಸಿದ ರಾಜ್ಯ ಮಟ್ಟದ (ಗ್ರಾಮೀಣ ಕ್ರೀಡಾಕೂಟ,ಮಹಿಳಾ ಕ್ರೀಡಾಕೂಟ) ಕ್ರೀಡಾಕೂಟಗಳಲ್ಲಿ ಪ್ರಥಮಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರುವ ಅಥವಾ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಂತಹ 06 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಮಾಧ್ಯಮಿಕ, ಫ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ ರೂ.10000/-ಗಳ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಆಸಕ್ತ ವಿದ್ಯಾರ್ಥಿ ಕ್ರೀಡಾಪಟುಗಳು ಆನ್‍ಲೈನ್‍ನಲ್ಲಿ ಜೂನ್ 30  ರೊಳಗೆ  ಅರ್ಜಿಗಳನ್ನು ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: