ಸುದ್ದಿ ಸಂಕ್ಷಿಪ್ತ

ಹಾಸನ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ : ಮದ್ಯ ನಿಷೇಧ

ಹಾಸನ (ಮೇ. 28): ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಮೇ 28 ರಂದು ಬೆಳಗ್ಗೆ 7 ಗಂಟೆಯಿಂದ ಮೇ 30 ರ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 31 ರಂದು ಬೆಳಗ್ಗೆ 6 ಗಂಟೆಯಿಂದ ಜೂನ್ 1 ರ ಬೆಳಗ್ಗೆ 6 ರವರೆಗೆ ಆಲೂರು ಮತ್ತು ಅಕರಲಗೂಡು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 3.ಕಿ.ಮೀ ಪರಿದಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಮೇ 29 ರಂದು ಈ ಎರಡೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು ಮೇ 31ರಂದು ಮತ ಎಣಿಕೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಚುನಾವಣಾ ಆಯೋಗದ ಸೂಚನೆಯಂತೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ದಂಡಾಧಿಕಾರಿ ಎಂ.ಎಲ್.ವೈಶಾಲಿ ಅವರು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಇದರಂತೆ ಮತದಾನದ ಕಾರಣ ಮೇ 28 ರಂದು ಬೆಳಗ್ಗೆ 7 ಗಂಟೆಯಿಂದ ಮೇ 30ರ ಬೆಳಗ್ಗೆ 6ರವರೆಗೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 31 ರಂದು ಬೆಳಗ್ಗೆ 6 ರಿಂದ ಜೂನ್ 1 ರ ಬೆಳಗ್ಗೆ 6 ರವರೆಗೆ ಆಲೂರು ಹಾಗೂ ಅರಕಲಗೂಡು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 3 ಕಿ.ಮೀ. ಪರಿಧಿಯಲ್ಲಿ ಎಲ್ಲಾ ಬಗೆಯ ಅಮಲು ಪಾನೀಯ ಹಾಗೂ ಮದ್ಯ ಶೇಖರಣೆ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವಂತಹ ಎಲ್ಲಾ ಬಗೆಯ ಸ್ಟಾರ್ ಹೋಟೆಲ್‍ಗಳು, ಡಾಬಾಗಳು, ರೆಸ್ಟೋರೆಂಟ್‍ಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ಹಾಗೂ ಮದ್ಯ ಸಾಗಾಟ ಮತ್ತು ಸರಬರಾಜು ಮಾಡುವುದನ್ನು ನಿಷೇಧಿಸಾಗಿದೆ ಎಂದು ಆದೇಶಿಸಿ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: