Uncategorized

ರಾಜಕೀಯದ ನಡುವೆಯೂ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಸಿಎಂ

ಬೆಂಗಳೂರು (ಮೇ 28): ಮುಖ್ಯಮಂತ್ರಿ ಎಚ್.ಡಿ .ಕುಮಾರಸ್ವಾಮಿ ಅವರು ಸೋಮವಾರ, ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹಾರಕಬಾವಿ ಗ್ರಾಮದಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸುಮಂಗಲಾ ಅವರಿಗೆ ಎರಡು ಪುಟ್ಟ ಮಕ್ಕಳಿದ್ದು ಗಂಡ ಅಪಘಾತದಲ್ಲಿ ಮೃತರಾಗಿದ್ದಾರೆ. ಜೀವನೋಪಾಯಕ್ಕಾಗಿ ಅತಿಥಿ ಶಿಕ್ಷಕಿಯ ಕರ್ತವ್ಯವನ್ನು ಮುಂದುವರೆಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕೆ.ಆರ್. ನಗರದ ರಾಧಾ, ರಾಜಶ್ರೀ, ಮಂಜುಳಾ ಎಸ್. ಹಾಗೂ ವೀಣಾ ಅವರು ಹೆಚ್ಚುವರಿ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಮರು ಕೌನ್ಸಿಲಿಂಗ್ ಮಾಡುವಂತೆ ಮನವಿ ಮಾಡಿದರು. ಈ ವಿಷಯವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. (ಎನ್.ಬಿ)

Leave a Reply

comments

Related Articles

error: