ಕರ್ನಾಟಕ

ದ.ಕನ್ನಡ ಕುಡಿಯುವ ನೀರಿನ ಸಮಸ್ಯೆ ಕುರಿತು ಸಿಎಂ ಚರ್ಚೆ

ಬೆಂಗಳೂರು (ಮೇ 28): ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸೋಮವಾರ, ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಕುರಿತು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಸಿ. ಎಸ್. ಪುಟ್ಟರಾಜು, ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಇಬ್ರಾಹಿಂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಜಯರಾಮ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅಂಜುಂ ಪರ್ವೇಜ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಸೆಲ್ವಮಣಿ, ಪಾಲ್ಗೊಂಡಿದ್ದರು. (ಎನ್.ಬಿ)

Leave a Reply

comments

Related Articles

error: