ಮೈಸೂರು

ದಡಾರ-ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಚಾಲನೆ

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಅಭಿಯಾನಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಶಿವಪ್ರಸಾದ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ದಡಾರ ಒಂದು ಮಾರಣಾಂತಿಕ ಕಾಯಿಲೆಯಾಗಿದ್ದು,ಕೆಮ್ಮು ಮತ್ತು ಸೀನುವುದರ ಮೂಲಕ ಇತರರಿಗೆ ಹರಡಲಿದೆ. ದಡಾರ,ಅತಿಸಾರ, ಮೆದುಳಿನ ಸೋಂಕಿನಂತಹ  ಕಾಯಿಲೆಗಳನ್ನು ತಡೆಗಟ್ಟಲಿದೆ. ತುರಿಕೆ.ವಿಪರಿತಜ್ವರ. ಕೆಮ್ಮು. ನೆಗಡಿ. ಮತ್ತು ಕೆಂಗಣ್ಣು ದಡಾರದ ಮುಖ್ಯ ಲಕ್ಷಣಗಳಾಗಿವೆ.
ರುಬೆಲ್ಲಾ ರೋಗವು ಗರ್ಭಿಣಿ ಸ್ತ್ರೀಯರಲ್ಲಿ ಕಾಣಿಸಿಕೊಂಡಾಗ ಹುಟ್ಟುವ ಮಕ್ಕಳಲ್ಲಿ ಕಣ್ಣಿನಪೂರೆ, ಕಿವುಡುತನ, ಮೆದುಳುಜ್ವರ, ಮಾನಸಿಕ ಅಸ್ವಸ್ಥತೆ, ಬುದ್ದಿ ಮಾಂದ್ಯತೆ  ಸೇರಿದಂತೆ ಹಲವಾರು ಕಾಯಿಲೆಗಳು ಹರಡುವ ಸಾಧ್ಯತೆ ಇದೆ ಎಂದರು. ರಾಷ್ಟ್ರಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಮೊಟ್ಟಮೊದಲ ಬಾರಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದು. 9ತಿಂಗಳಿನಿಂದ 15 ವರ್ಷದ ಮಕ್ಕಳಿಗೆ ನೀಡಲಾಗುತ್ತದೆ. ಎಂದು ತಿಳಿಸಿದರು.

Leave a Reply

comments

Related Articles

error: